ಸಂಪಾದಕರ ಮೇಲೆ ದೂರು: ಕೆಯುಡಬ್ಲ್ಯುಜೆ ಖಂಡನೆ

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿಗೆ ಸಂಬಂಧಪಟ್ಟಂತೆ ...

Published: 28th May 2019 12:00 PM  |   Last Updated: 28th May 2019 11:44 AM   |  A+A-


Nikhil Kumaraswamy and Vishweshwar Bhat

ನಿಖಿಲ್ ಕುಮಾರಸ್ವಾಮಿ-ವಿಶ್ವೇಶ್ವರ ಭಟ್

Posted By : SUD SUD
Source : Online Desk
ಬೆಂಗಳೂರು: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿಗೆ ಸಂಬಂಧಪಟ್ಟಂತೆ ಸುಳ್ಳು ವರದಿ ಪ್ರಕಟಿಸಲಾಗಿದೆ ಎಂಬ ದೂರಿನ ಹಿನ್ನಲೆಯಲ್ಲಿ ವಿಶ್ವವಾಣಿ ಪತ್ರಿಕೆ ಸಂಪಾದಕ ವಿಶ್ವೇಶ್ವರ ಭಟ್ ಅವರ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿರುವುದು ಸೂಕ್ತ ಕ್ರಮವಲ್ಲ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆರೋಪಿಸಿದೆ.

ಈ ಬಗ್ಗೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿರುವ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಪತ್ರಿಕೆಯಲ್ಲಿ ಬಂದಿರುವ ಸುದ್ದಿ ಉದ್ದೇಶಪೂರಿತವಾಗಿದ್ದರೆ, ಸುಳ್ಳು ಮಾಹಿತಿಯಾಗಿದ್ದರೆ ಸ್ಪಷ್ಟನೆ, ವಿವರಣೆ ಕೊಡುವುದು ಕ್ರಮಬದ್ಧವಾದದ್ದು. ಅದನ್ನು ಬಿಟ್ಟು ಸುದ್ದಿ ನೆಪ ಮಾಡಿ ದೂರು ದಾಖಲಿಸಿರುವುದು ದ್ವೇಷದ ನಡವಳಿಕೆಗೆ ಇಂಬು ನೀಡಿದಂತಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಈ ಹಿಂದೆಯೂ ಪತ್ರಕರ್ತರ ಮೇಲಿನ ಹಲವು ಪ್ರಕರಣಗಳ ಬಗ್ಗೆ ತಮ್ಮ ಗಮನಕ್ಕೆ ತಂದಾಗ ತಾವು ಸ್ಪಂದಿಸಿದ್ದೀರಿ. ಮಾಧ್ಯಮ ಸ್ನೇಹಿಯಾಗಿ ನಡೆದುಕೊಂಡಿದ್ದೀರಿ ಅದನ್ನು ಸಂಘ ಸ್ಮರಿಸುತ್ತದೆ. ವಿಶ್ವವಾಣಿ ಮೇಲೆ ದೂರು ದಾಖಲಿಸಿರುವುದು ತಮ್ಮ ಗಮನಕ್ಕೆ ಬಾರದೆಯೂ ಇರಬಹುದು. ಈ ಬಗ್ಗೆ ತಾವು ಮಾಹಿತಿ ತರಿಸಿಕೊಂಡು ಪರಿಶೀಲಿಸಿ ಪ್ರಕರಣ ಅಂತ್ಯಗೊಳಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
Stay up to date on all the latest ರಾಜ್ಯ news with The Kannadaprabha App. Download now
facebook twitter whatsapp