ಮಂಗಳೂರು: ಕುಖ್ಯಾತ ರೌಡಿ ಕಾಲಿಗೆ ಪೊಲೀಸರಿಂದ ಗುಂಡೇಟು

ಬಂಧಿಸಲು ತೆರಳಿದ ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ ಕುಖ್ಯಾತ ರೌಡಿ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಮಂಗಳವಾರ ತಡರಾತ್ರಿ ಮಂಗಳೂರಿನಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಮಂಗಳೂರು: ಬಂಧಿಸಲು ತೆರಳಿದ ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ ಕುಖ್ಯಾತ ರೌಡಿ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಮಂಗಳವಾರ ತಡರಾತ್ರಿ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರಿನ ಹೊರವಲಯ ಪಚ್ಚನಾಡಿ ಎಂಬಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಕುಖ್ಯಾತ ರೌಡಿ ಉಮರ್ ಫಾರೂಕ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಪ್ರಸ್ತುತ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.  
ಪೊಲೀಸ್ ಮೂಲಗಳ ಪ್ರಕಾರ ಸಮೀರ್ ಎಂಬಾತನ ಕೊಲೆಗೆ ಸಂಚು ರೂಪಿಸಿದ ಪ್ರಕರಣದಲ್ಲಿ ಈತನನ್ನು ಬಂಧಿಸಲು ತೆರಳಿದ ವೇಳೆ ಘಟನೆ ನಡೆದಿದೆ. ಸಮೀರ್ ಟಾರ್ಗೆಟ್ ಗ್ರೂಪ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯಾಗಿದ್ದು, ಉಮರ್ ಫಾರೂಕ್ ಇಲ್ಯಾಸ್ ನ ಬಾವ ಎಂದು ಪೊಲೀಸರು ತಿಳಿಸಿದ್ದಾರೆ.
ಏನಿದು ಘಟನೆ?
ಘಟನೆಯಲ್ಲಿ  ಸಂದೀಪ್ ಎಂಬ ಪೊಲೀಸ್ ಪೇದೆ  ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ಪ್ರಕರಣಗಳಲ್ಲಿ ಬೇಕಾಗಿದ್ದ ಉಮ್ಮರ್ ಫಾರೂಕ್ ನನ್ನು ಬಂಧಿಸಲು ಮಂಗಳವಾರ ತಡರಾತ್ರಿ ಪೊಲೀಸ್ ತಂಡ ನಗರದ ಹೊರ ವಲಯದ ಪಚ್ಚನಾಡಿಗೆ ತೆರಳಿತ್ತು. ಈ ಸಂದರ್ಭ ಆರೋಪಿ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಶರಣಾಗುವಂತೆ ಪೊಲೀಸರು ಮನವಿ ಮಾಡಿದರೂ ಆತ ಪ್ರತಿರೋಧ ಒಡ್ಡಿದ್ದಾನೆ. ಅಂತಿಮವಾಗಿ ಆತನ ಕಾಲಿಗೆ ಗುಂಡು ಹೊಡೆದು ಆತನನ್ನು ಬಂಧಿಸಿದ್ದಾರೆ.
ಕೆಲವು ದಿನಗಳ ಹಿಂದೆ ನಟೋರಿಯಸ್ ರೌಡಿ ಗೌರೀಶ್ ನನ್ನು ಬಂಧಿಸಲು ಹೋದಾಗ ಜಪ್ಪಿನಮೊಗರು ಬಳಿ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ. ಆತನ ಮೇಲೂ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದರು. ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com