ಡಿಸಿಎಂ ಪರಮೇಶ್ವರ್ ಗೆ ಬಿಗ್ ರಿಲೀಫ್: ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದ ಸಮನ್ಸ್ ಗೆ ಹೈಕೋರ್ಟ್ ತಡೆ

ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರಿಗೆ ರಾಜ್ಯ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಜಮಖಂಡಿ ಉಪಚುನಾವಣೆಯ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ದಾಖಲಾದ....
ಡಾ. ಜಿ. ಪರಮೇಶ್ವರ
ಡಾ. ಜಿ. ಪರಮೇಶ್ವರ
ಬೆಂಗಳೂರು: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರಿಗೆ ರಾಜ್ಯ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಜಮಖಂಡಿ ಉಪಚುನಾವಣೆಯ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿವಿಶೇಷ ನ್ಯಾಯಾಲಯವು ಹೊರಡಿಸಿದ್ದ ಸಮನ್ಸ್ ಗೆ ಹೈಕೋರ್ಟ್ ತಡೆ ನೀಡಿದೆ.
ಚುನಾಯಿತ ಪ್ರತಿನಿಧಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಲು ಸ್ಥಾಪಿಸಿದ ವಿಶೇಷ ನ್ಯಾಯಾಲಯವು, ಪರಮೇಶ್ವರ ಅವರಿಗೆ ಸಮನ್ಸ್ ನೀಡಿತ್ತು. ಆ ಆದೇಶಕ್ಕೆ ಗುರುವಾರ ಹೈಕೋರ್ಟ್ ತಡೆ ನೀಡಿದೆ.
ಐಪಿಸಿ ಸೆಕ್ಷನ್ 171 ಎಫ್ ಅಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಣ ಸಿಆರ್ಪಿಸಿ ಸೆಕ್ಷನ್ 155 ರ ಪ್ರಕಾರ ಪೊಲೀಸರು ವಿಚಾರಣೆ ನಡೆಸಲು ಮ್ಯಾಜಿಸ್ಟ್ರೇಟ್ ನಿಂದ ಅನುಮತಿ ಪಡೆಯಬೇಕಾಗಿದೆ. ಆದರೆ ಈ ಪ್ರಕರಣದಲಿ ಪೋಲೀಸರು ಅನುಮತಿ ಪಡೆದಿಲ್ಲ ಎಂದು ಪರಮೇಶ್ವರ ವಾದಿಸಿದ್ದಾರೆ. ಇದರಿಂದಾಗಿ ಪ್ರಕರ್ಣವು ಕಾನೂನು ರೀತ್ಯಾ ದಾಖಲಾಗುವುದಿಲ್ಲ ಎನ್ನಲಾಗಿದೆ.
2018 ರ ಅಕ್ಟೋಬರ್ 24 ರಂದು ಪರಮೇಶ್ವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಮತದಾರರು ಕಾಂಗ್ರೆಸ್ ಅಭ್ಯರ್ಥಿಯನ್ನು ಆಯ್ಕೆ ಮಾಡಿದರೆ ಜಂಬಗಿ-ಸಾವಳ್ಳಿ ನಡುವಿನ ರಸ್ತೆಯನ್ನು ಮೂರು ತಿಂಗಳುಗಳಲ್ಲಿ ಉನ್ನತೀಕರಿಸಲಾಗುತ್ತದೆ ಎಂದು ಭರವಸೆ ನೀಡಿದ್ದರು.ಇದಕ್ಕೆ ಪ್ರತಿಯಾಗಿ ಉಪಮುಖ್ಯಮಂತ್ರಿಗಳು ಂಆದರಿ ನೀತಿ ಸಂಹಿತೆ ಉಲ್ಲಂಘಿಸಿದ್ದರೆಂದು ಆರೋಪಿಸಿ  ಬಾಗಲಕೋಟೆ ಜಿಲ್ಲೆಯ ಸಾವಳಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com