ಮತ್ತೊಂದು ಬಹುಕೋಟಿ ವಂಚನೆ ಪ್ರಕರಣ?: ಕಣ್ವ ಕೋ ಆಪರೇಟಿವ್ ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕನ ಬಂಧನ

ಐಎಂಎ ವಂಚನೆ ಪ್ರಕರಣ ಹಸಿರಾಗಿರುವಂತೆಯೇ ಇತ್ತ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಬಹುಕೋಟಿ ವಂಚನೆ ಪ್ರಕರಣದ ಸುಳಿವು ಪತ್ತೆಯಾಗಿದ್ದು, ಹೂಡಿಕೆದಾರರಿಗೆ ಬಹುಕೋಟಿ ವಂಚಿಸಿದ ಆರೋಪದ ಮೇರೆಗೆ ಕಣ್ವ ಕೋ ಆಪರೇಟಿವ್ ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕನನ್ನು ಬಂಧಿಸಲಾಗಿದೆ ಎನ್ನಲಾಗಿದೆ.

Published: 01st November 2019 07:30 PM  |   Last Updated: 03rd November 2019 10:54 AM   |  A+A-


Kanva Souhardha group MD Arrested

ಸಂಗ್ರಹ ಚಿತ್ರ

Posted By : Srinivasamurthy VN
Source : UNI

ಬೆಂಗಳೂರು: ಐಎಂಎ ವಂಚನೆ ಪ್ರಕರಣ ಹಸಿರಾಗಿರುವಂತೆಯೇ ಇತ್ತ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಬಹುಕೋಟಿ ವಂಚನೆ ಪ್ರಕರಣದ ಸುಳಿವು ಪತ್ತೆಯಾಗಿದ್ದು, ಹೂಡಿಕೆದಾರರಿಗೆ ಬಹುಕೋಟಿ ವಂಚಿಸಿದ ಆರೋಪದ ಮೇರೆಗೆ ಕಣ್ವ ಕೋ ಆಪರೇಟಿವ್ ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕನನ್ನು ಬಂಧಿಸಲಾಗಿದೆ ಎನ್ನಲಾಗಿದೆ.

ಈ ಬಗ್ಗೆ ಸುದ್ದಿಸಂಸ್ಥೆಯೊಂದು ವರದಿ ಮಾಡಿದ್ದು,  ಕಡಿಮೆ ದರದಲ್ಲಿ ನಿವೇಶನ ಕೊಡಿಸುವುದಾಗಿ ಹಣ ಪಡೆದು ನಿವೇಶನ ನೀಡದೇ ವಂಚಿಸಿರುವ ಆರೋಪದ ಹಿನ್ನೆಲೆಯಲ್ಲಿ ಕಣ್ವ ಕೋ ಆಪರೇಟಿವ್ ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕ ನಂಜುಂಡಯ್ಯ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.

ಕಣ್ವ ಕೋ ಆಪರೇಟಿವ್ ಸೊಸೈಟಿ ವಿರುದ್ಧ ಬಸವೇಶ್ವರ ನಗರ ಠಾಣೆಯಲ್ಲಿ ಗುರುವಾರ ನಾಲ್ಕು ದೂರುಗಳು ದಾಖಲಾಗಿದ್ದವು. ಹೀಗಾಗಿ ಗುರುವಾರ ವಿಚಾರಣೆಗೆ ಕರೆಸಿದ್ದ ಪೊಲೀಸರು ತಡರಾತ್ರಿಯವರೆಗೂ ವಿಚಾರಣೆ ನಡೆಸಿದ ಬಳಿಕ ನಂಜುಂಡಯ್ಯ ಅವರನ್ನು ಬಂಧಿಸಿದ್ದಾರೆ.

ಇತ್ತಿಚೆಗಷ್ಟೇ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಐಎಂಎ ಕಂಪನಿಯ ಬಹುಕೋಟಿ ವಂಚನೆಯ ನಂತರ ಕಣ್ವ ಗ್ರೂಪ್​ನಲ್ಲಿ ಹಣ ಹೂಡಿದ್ದವರು ಭೀತಿಗೊಳಗಾಗಿದ್ದರು. ಕಣ್ವ ಗ್ರೂಪ್ ಮಾಲೀಕನನ್ನು ಹಣ ಮರಳಿಸುವಂತೆ ಒತ್ತಾಯಿಸಿದ್ದರು. ಆದರೆ, ಕೆಲವರಿಗೆ ಹಣ ಹಿಂದಿರುಗಿಸಿದ್ದ ನಂಜುಂಡಯ್ಯ, ಅನೇಕರಿಗೆ ಹಣ ಮರುಪಾವತಿ ಮಾಡಿರಲಿಲ್ಲ. ಇದೇ ವಿಚಾರವಾಗಿ ನಿನ್ನೆ ಪ್ರತಿಭಟನೆ ಕೂಡ ನಡೆಸಿ, ಬಸವೇಶ್ವರ ನಗರ ಪೊಲೀಸರಿಗೆ ದೂರು ನೀಡಿದ್ದರು.

ಸದ್ಯ ಪೊಲೀಸ್​ ಮೂಲಗಳ ಮಾಹಿತಿ ಪ್ರಕಾರ 350 ಕೋಟಿ ರೂ.ಗಿಂತ ಹೆಚ್ಚಿನ ಹೂಡಿಕೆ ಮತ್ತು ವ್ಯವಹಾರ ನಡೆದಿದೆ ಎನ್ನಲಾಗಿದೆ. ಕಣ್ವ ಗ್ರೂಪ್ಸ್​ನಲ್ಲಿ ನಾಲ್ಕು ಸಾವಿರ ಕಾರ್ಮಿಕರು ಕೆಲಸ ಮಾಡುತಿದ್ದಾರೆ. ಇದೀಗ ಎಲ್ಲರ ಬದುಕು ಅತಂತ್ರವಾಗಿದೆ ಎಂಬ ಆರೋಪವೂ ಕೇಳಿ ಬರುತ್ತಿದೆ.

Stay up to date on all the latest ರಾಜ್ಯ news
Poll
Online education learning

ಆನ್‌ಲೈನ್ ಕಲಿಕೆಯ ಪ್ರಯೋಗವು ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುತ್ತದೆ ಎಂದು ಹಾರ್ವರ್ಡ್ ಪ್ರಾಧ್ಯಾಪಕರೊಬ್ಬರು ಹೇಳಿದ್ದಾರೆ. ನೀವು ಏನಂತೀರಿ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp