ನ. 5ಕ್ಕೆ ಶಿವಮೊಗ್ಗಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ

ಇದೇ ತಿಂಗಳ 5 ರಂದು ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಶಿವಮೊಗ್ಗದಲ್ಲಿ ಚೈತನ್ಯ ಸಮಾವೇಶ ಆಯೋಜಿಸಲಾಗಿದೆ. ಸಮಾವೇಶ ಮೂಲಕ ಪಕ್ಷ ಸಂಘಟನೆಗೆ ಹುರುಪು ನೀಡಲು ಸಿದ್ದರಾಮಯ್ಯ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ.

Published: 01st November 2019 01:25 PM  |   Last Updated: 01st November 2019 01:25 PM   |  A+A-


Siddaramaiah

ಸಿದ್ದರಾಮಯ್ಯ

Posted By : Manjula VN
Source : UNI

ಶಿವಮೊಗ್ಗ: ಇದೇ ತಿಂಗಳ 5 ರಂದು ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಶಿವಮೊಗ್ಗದಲ್ಲಿ ಚೈತನ್ಯ ಸಮಾವೇಶ ಆಯೋಜಿಸಲಾಗಿದೆ. ಸಮಾವೇಶ ಮೂಲಕ ಪಕ್ಷ ಸಂಘಟನೆಗೆ ಹುರುಪು ನೀಡಲು ಸಿದ್ದರಾಮಯ್ಯ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ.

ಸೊರಬದ ಪಕ್ಕದ ಕ್ಷೇತ್ರಗಳಾದ ಹಿರೇಕೆರೂರು, ಯಲ್ಲಾಪುರ ಉಪಚುನಾವಣೆ ಎದುರಾಗಿದೆ. ಶಿವಮೊಗ್ಗ ಜಿಲ್ಲೆಯ ಕಾರ್ಯಕರ್ತರು ಹಾಗೂ ಮುಖಂಡರ ಬೆಂಬಲ ಅಗತ್ಯವಿದೆ‌. ಹೀಗಾಗಿ ಈ ಎರಡು ಮತಕ್ಷೇತ್ರಗಳನ್ನು ಗೆಲ್ಲಲು ಸೊರಬ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಬೆಂಬಲವೂ ಅಗತ್ಯವಿದೆ. ಈ ನಿಟ್ಟಿನಲ್ಲಿ ಉಪಚುನಾವಣೆಯ ಜವಾಬ್ದಾರಿ ಹೊತ್ತಿರುವ ಸಿದ್ದರಾಮಯ್ಯ ಸಮಾವೇಶ ಮೂಲಕ ಪಕ್ಷದ ಕಾರ್ಯಕರ್ತರಲ್ಲಿ ಚೈತನ್ಯ ತುಂಬಲು ಮುಂದಾಗಿದ್ದಾರೆ.

ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಅವರಿಗೆ ಎರಡು ಬಾರಿ ಕಾಂಗ್ರೆಸ್ ಬೆಂಬಲ ನೀಡಿದೆ. ಈ ಬಾರಿ ಉಪಚುನಾವಣೆಗೆ ಮಧುಬಂಗಾರಪ್ಪ ಕಾಂಗ್ರೆಸ್ ಕಾರ್ಯಕರ್ತರ ಪರ ನಿಲ್ಲಲಿ ಎಂದು‌ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಶೇಷಾದ್ರಿ ಹಾಗೂ ಮುಖಂಡ ರಾಜು ಎಂ.ತಲ್ಲೂರು ಆಗ್ರಹಿಸಿದ್ದಾರೆ.

Stay up to date on all the latest ರಾಜ್ಯ news
Poll
Parliament

ಸಂಸತ್ತಿನ ಈ ಮುಂಗಾರು ಅಧಿವೇಶನವು ಪ್ರಜಾಪ್ರಭುತ್ವದ ಕಗ್ಗೊಲೆಗೆ ಸಾಕ್ಷಿಯಾಯಿತೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp