ನವೆಂಬರ್ ಅಂತ್ಯದೊಳಗೆ ರಸ್ತೆಗಳ ಗುಂಡಿ ಮುಚ್ಚಿ, ಇಲ್ಲವಾದರೆ ಕಡ್ಡಾಯ ರಜೆ ಮೇಲೆ ತೆರಳಿ: ಡಿಸಿಎಂ ಕಾರಜೋಳ 

ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ಎಲ್ಲಾ ರಸ್ತೆಗಳ ಗುಂಡಿ ಮಚ್ಚುವ ಕೆಲಸವನ್ನು ನವೆಂಬರ್ 30 ರೊಳಗೆ ಪೂರ್ಣಗೊಳಿಸಬೇಕು. ಇಲ್ಲದಿದ್ದರೆ ಸಂಬಂಧಿಸಿದ ಇಂಜಿನಿಯರ್‌ಗಳ ಕಾರ್ಯನಿರ್ವಹಣಾ ವರದಿ( ಸಿಆರ್) ಯಲ್ಲಿ ಅವರ ಅಸಮರ್ಥ್ಯತೆ ಕುರಿತು ನಮೂದಿಸಿ ಕಡ್ಡಾಯ ರಜೆ ಮೇಲೆ ಕಳುಹಿಸಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಅವರು ಸೂಚಿಸಿದ್ದಾರೆ.
ಪ್ರಗತಿ ಪರಿಶೀಲನೆ ಸಭೆ
ಪ್ರಗತಿ ಪರಿಶೀಲನೆ ಸಭೆ

ಬೆಂಗಳೂರು:  ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ಎಲ್ಲಾ ರಸ್ತೆಗಳ ಗುಂಡಿ ಮಚ್ಚುವ ಕೆಲಸವನ್ನು ನವೆಂಬರ್ 30 ರೊಳಗೆ ಪೂರ್ಣಗೊಳಿಸಬೇಕು. ಇಲ್ಲದಿದ್ದರೆ ಸಂಬಂಧಿಸಿದ ಇಂಜಿನಿಯರ್‌ಗಳ ಕಾರ್ಯನಿರ್ವಹಣಾ ವರದಿ( ಸಿಆರ್) ಯಲ್ಲಿ ಅವರ ಅಸಮರ್ಥ್ಯತೆ ಕುರಿತು ನಮೂದಿಸಿ ಕಡ್ಡಾಯ ರಜೆ ಮೇಲೆ ಕಳುಹಿಸಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಅವರು ಸೂಚಿಸಿದ್ದಾರೆ.

ವಿಕಾಸಸೌಧದಲ್ಲಿಂದು ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ಯೋಜನೆಗಳ ಪ್ರಗತಿ, ಅಪೆಂಡಿಕ್ಸ್ ಇ, ರಸ್ತೆ ಮತ್ತು ಸೇತುವೆ, ಕಟ್ಟಡ ಮುಂದುವರೆದ ಹಾಗೂ ಹೊಸ ರಸ್ತೆ ಮತ್ತು ಸೇತುವೆ ಕಾಮಗಾರಿಗಳ ಕುರಿತು ನಡೆದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಸಂಭವಿಸಿದ ನೆರೆ ಹಾವಳಿ, ಭೀಕರ ಮಳೆಯಿಂದ ರಸ್ತೆಗಳು ದುರಸ್ತಿಗೆ ಬಂದಿದ್ದು, ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗಿದೆ. ಈ ರಸ್ತೆಗಳ ನಿರ್ಮಾಣ ಹಾಗು ನಿರ್ವಹಣೆ ಕಾಮಗಾರಿಗಳನ್ನು ತುರ್ತಾಗಿ ಕೈಗೊಳ್ಳಲು ಪಾರದರ್ಶಕ ಕಾಯ್ದೆಯ ವಿನಾಯಿತಿಯನ್ನು ನೀಡಲಾಗಿದೆ. ಯಾವುದೇ ನೆಪಹೇಳದೇ ಈ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಈ ಕಾಮಗಾರಿಗಳ ಕುರಿತು ವಾರಕ್ಕೊಂದು ಬಾರಿ ವರದಿ ಸಲ್ಲಿಸಬೇಕು. ವರದಿ ನೀಡದಿದ್ದವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗುವುದು. ಯಾವುದೇ ಇಂಜಿನಿಯರ್‌ಗಳ ವರ್ಗಾವಣೆ, ಕಡ್ಡಾಯ ರಜೆ ಮೇಲೆ ಕಳುಹಿಸುವ ಪ್ರಸ್ತಾವನೆಯಲ್ಲಿ ಕಾರಣವನ್ನು ಸ್ಪಷ್ಟವಾಗಿ ನಮೂದಿಸುವಂತೆ ಸೂಚಿಸಿದರು.

ಮಾರ್ಚ್ ಅಂತ್ಯದೊಳಗೆ ಎಲ್ಲಾ ಯೋಜನಾ ಕಾಮಗಾರಿಗಳನ್ನು ಉತ್ತಮ ಗುಣಮಟ್ಟದಲ್ಲಿ ಪೂರ್ಣಗೊಳಿಸಬೇಕು. ಕಟ್ಟಡ ನಿರ್ಮಾಣ ಯೋಜನೆಯಡಿ 1500 ಕೋಟಿ ರೂ. ವೆಚ್ಚದ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ. 800 ಕೋಟಿ ರೂ. ವೆಚ್ಚದ ನ್ಯಾಯಾಲಯ ಕಟ್ಟಡ ಕಾಮಗಾರಿಗಳೂ ಪ್ರಗತಿಯ ಹಂತದಲ್ಲಿವೆ. ನ್ಯಾಯಾಲಯ ಕಟ್ಟಡ ನಿರ್ಮಾಣ ಕುರಿತ ಪ್ರಸ್ತಾವನೆಗಳು ಬಂದಿವೆ. 50 ಇಲಾಖೆಗಳಿಗೆ ಪ್ರತ್ಯೇಕ ಬಜೆಟ್ ಹಂಚಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಯಾ ಇಲಾಖೆಗಳ ಕಟ್ಟಡ ನಿರ್ಮಾಣ ಯೋಜನೆಗೆ ಸಂಬಂಧಿಸಿದ ಇಲಾಖೆಯ ಅನುದಾನದಲ್ಲೇ ನಿರ್ಮಾಣ ಮಾಡಬೇಕು. ನಿವೇಶನ ಇಲ್ಲದ ಯಾವುದೇ ಇಲಾಖೆಗಳ ಕಟ್ಟಡ ನಿರ್ಮಾಣ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಬಾರದು. ಈ ಕಟ್ಟಡ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆಯ ಅನುದಾನವನ್ನು ಬಳಕೆ ಮಾಡಬಾರದು. ನೀಲನಕ್ಷೆಗೆ ಅನುಗುಣವಾಗಿ ಕಟ್ಟಡಗಳನ್ನು ನಿರ್ಮಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಲೋಕೋಪಯೋಗಿ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಕಾರ್ಯದರ್ಶಿ ಗುರುಪೊರಸಾದ್, ಡಿಸಿಎಂ ಆಪ್ತ ಕಾರ್ಯದರ್ಶಿ ವಿ. ಶ್ರೀನಿವಾಸ್, ಎಲ್ಲಾ ವಲಯಗಳ ಮುಖ್ಯ ಇಂಜಿನಿಯರ್ ಗಳು, ಅಧೀಕ್ಷಕ ಇಂಜಿನಿಯರ್ ಗಳು ಹಾಜರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com