ಸಿನಿಮೀಯ ಶೈಲಿಯಲ್ಲಿ ವ್ಯಕ್ತಿ ಕೊಲೆ: ಹಳೆ ವೈಷಮ್ಯ ಶಂಕೆ

ಚಲಿಸುತ್ತಿದ್ದ ಕಾರಿಗೆ ಮತ್ತೊಂದು ಕಾರಿನಿಂದ ಡಿಕ್ಕಿ ಹೊಡೆದು ಬಳಿಕ‌ ವ್ಯಕ್ತಿಯನ್ನು ಸಿನಿಮೀಯ ಶೈಲಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕಲಬುರಗಿ ಹೊರವಲಯದ ಸಿರಸಗಿ ಗ್ರಾಮದ ಬಳಿ ಸೋಮವಾರ ತಡರಾತ್ರಿ ನಡೆದಿದೆ.

Published: 05th November 2019 11:11 AM  |   Last Updated: 05th November 2019 11:11 AM   |  A+A-


Representational image

ಸಾಂದರ್ಭಿಕ ಚಿತ್ರ

Posted By : Shilpa D
Source : UNI

ಕಲಬುರಗಿ: ಚಲಿಸುತ್ತಿದ್ದ ಕಾರಿಗೆ ಮತ್ತೊಂದು ಕಾರಿನಿಂದ ಡಿಕ್ಕಿ ಹೊಡೆದು ಬಳಿಕ‌ ವ್ಯಕ್ತಿಯನ್ನು ಸಿನಿಮೀಯ ಶೈಲಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕಲಬುರಗಿ ಹೊರವಲಯದ ಸಿರಸಗಿ ಗ್ರಾಮದ ಬಳಿ ಸೋಮವಾರ ತಡರಾತ್ರಿ ನಡೆದಿದೆ.

ಶಿವಲಿಂಗ್ ಕೊಲೆಯಾದ ವ್ಯಕ್ತಿ. ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ‌ ಮಾಡಲಾಗಿದ್ದು, ಕೊಲೆಯ ಹಿಂದೆ ಕಾಂಗ್ರೆಸ್ ಜಿಲ್ಲಾ ಪಂಚಾಯ್ತಿ ಸದಸ್ಯ ಶಾಂತಪ್ಪ ಕೂಡಲಗಿ ಸೇರಿದಂತೆ ಹಲವರ ಕೈವಾಡವಿದೆ ಎಂದು ಮೃತ ಶಿವಲಿಂಗ್ ಸಂಬಂಧಿಕರು ಆರೋಪಿಸಿದ್ದಾರೆ.

ಇತ್ತೀಚೆಗೆ ಗ್ರಾಮದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಕೊಲೆಯಾದ ಶಿವಲಿಂಗ್ ಜೈಲಿಗೆ ಹೋಗಿ ಸೋಮವಾರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಈ ವಿಷಯ ತಿಳಿದು ಶಾಂತಪ್ಪ ಸಂಬಂಧಿಕರು ಮಾರಕಾಸ್ತ್ರಗಳಿಂದ ಶಿವಲಿಂಗ್ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.ಈ ಸಂಬಂಧ ಪ್ರಕರಣ ದಾಖಲಾಗಿದ್ದು ಆರೋಪಿಗಳಾಗಾಗಿ ಪೊಲೀಸರು ಶೋಧ ಮುಂದುವರಿಸುತ್ತಿದ್ದಾರೆ, 

Stay up to date on all the latest ರಾಜ್ಯ news with The Kannadaprabha App. Download now
facebook twitter whatsapp