ದೇಶದ ಆರ್ಥಿಕ ವಸ್ತುಸ್ಥಿತಿ ಅರಿಯಲು ಆರ್ಥಿಕ ಗಣತಿ ಅತಿಮುಖ್ಯ: ಯಡಿಯೂರಪ್ಪ

ದೇಶದ ಆರ್ಥಿಕ ವಸ್ತುಸ್ಥಿತಿ ಅರಿಯಲು ಮತ್ತು ಸರ್ಕಾರದ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಆರ್ಥಿಕ ಗಣತಿ ಪ್ರಮುಖ ಪಾತ್ರವಹಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
7 ನೇ ಆರ್ಥಿಕ ಗಣತಿ ಕಾರ್ಯಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ
7 ನೇ ಆರ್ಥಿಕ ಗಣತಿ ಕಾರ್ಯಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ

ಬೆಂಗಳೂರು: ದೇಶದ ಆರ್ಥಿಕ ವಸ್ತುಸ್ಥಿತಿ ಅರಿಯಲು ಮತ್ತು ಸರ್ಕಾರದ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಆರ್ಥಿಕ ಗಣತಿ ಪ್ರಮುಖ ಪಾತ್ರವಹಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಹಮ್ಮಿಕೊಂಡಿದ್ದ 7 ನೇ ಆರ್ಥಿಕ ಗಣತಿ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ, ಸರ್ಕಾರದ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಆರ್ಥಿಕ ಗಣತಿ ದಿಕ್ಸೂಚಿ ಆಗಿದೆ ಎಂದರು.

ಪ್ರಥಮ ಬಾರಿಗೆ 7ನೇ ಆರ್ಥಿಕ ಗಣತಿಯನ್ನು ಮೊಬೈಲ್ ಆಪ್ ಮೂಲಕ ಸಂಗ್ರಹಿಸುತ್ತಿರುವುದು ಪ್ರಶಂಸನೀಯ. ಈ ವ್ಯವಸ್ಥೆಯಿಂದ ಮಾಹಿತಿಗಳನ್ನು ಅತಿ ಶೀಘ್ರವಾಗಿ ಸಂಗ್ರಹಿಸಲು ಸಾಧ್ಯವಾಗಲಿದೆ. ಜತೆಗ ವರದಿ ತಯಾರಿಸುವುದು ಸೇರಿದಂತೆ ಮಾಹಿತಿಯು ಹೆಚ್ಚು ನಿಖರವಾಗಿರುತ್ತದೆ ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com