ಬೆಂಗಳೂರು: ಬೆಳ್ಳಂಬೆಳಗ್ಗೆ ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ

ಅಕ್ರಮ ವ್ಯವಹಾರಗಳನ್ನು ನಡೆಸಿರುವ ಪ್ರಕರಣದಲ್ಲಿ ನಗರದ ಹಲವು ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ ನಡೆಸಿದ್ದು, ಶೋಧ ಕಾರ್ಯ ಮುಂದುವರೆಸಿದೆ.

Published: 06th November 2019 12:54 PM  |   Last Updated: 06th November 2019 12:54 PM   |  A+A-


Representational image

ಸಾಂದರ್ಭಿಕ ಚಿತ್ರ

Posted By : shilpa
Source : UNI

ಬೆಂಗಳೂರು: ಅಕ್ರಮ ವ್ಯವಹಾರಗಳನ್ನು ನಡೆಸಿರುವ ಪ್ರಕರಣದಲ್ಲಿ ನಗರದ ಹಲವು ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ ನಡೆಸಿದ್ದು, ಶೋಧ ಕಾರ್ಯ ಮುಂದುವರೆಸಿದೆ.

ತೆರಿಗೆ ವಂಚನೆ, ಸರ್ಕಾರಕ್ಕೆ ಸೂಕ್ತ ದಾಖಲೆ ಸಲ್ಲಿಸದಿರುವ ಹಿನ್ನೆಲೆಯಲ್ಲಿ ಏಕಕಾಲದಲ್ಲಿ ಸುಮಾರು 11 ಉದ್ಯಮಿಗಳ ಮನೆ ಮೇಲೆ ಐಟಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಇಂದು ಬೆಳಗ್ಗೆ 7 ಗಂಟೆಗೆ ಐಟಿ ದಾಳಿ ಆರಂಭವಾಯಿತು ಎಂದು ಐಟಿ ಇಲಾಖೆ ಮೂಲಗಳು ತಿಳಿಸಿವೆ. ನಗರದ ವರ್ತೂರು, ಎಲೆಕ್ಟ್ರಾನಿಕ್ ಸಿಟಿಗಳಲ್ಲಿರುವ ಕೆಲ ಕಂಪನಿಗಳ ಮೇಲೂ ದಾಳಿ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇಲ್ಲಿನ ಉದ್ಯಮಿಗಳು ಚೆನ್ನೈ ನಲ್ಲಿಯೂ ಉದ್ಯಮ ನಡೆಸುತ್ತಿರುವ ಹಿನ್ನೆಲೆಯಲ್ಲಿ ಚೆನ್ನೈ ಐಟಿ ಅಧಿಕಾರಿಗಳಿಂದ ಅಲ್ಲಿಯೂ ದಾಳಿ ನಡೆಸಿ ಶೋಧ ಕಾರ್ಯ ಮುಂದುವರೆಸಿದ್ದಾರೆ. ಬೆಂಗಳೂರು ಹಾಗೂ ಚೆನ್ನೈ ಐಟಿ ತಂಡ ಜಂಟಿಯಾಗಿ ಏಕಕಾಲಕ್ಕೆ ಐಟಿ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ.

Stay up to date on all the latest ರಾಜ್ಯ news
Poll
farmers-Protest

ದೆಹಲಿಯಲ್ಲಿ ಟ್ರಾಕ್ಟರ್ ಪೆರೇಡ್ ಸಮಯದಲ್ಲಿನ ಹಿಂಸಾಚಾರವು ರೈತರ ಆಂದೋಲನದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp