ಹಿರೆಕೇರೂರು ತಾಲೂಕು ಅಭಿವೃದ್ಧಿಗೆ ಹೆಚ್ಚಿನ ಅನುದಾನ: ಮುಖ್ಯಮಂತ್ರಿ ಯಡಿಯೂರಪ್ಪ 

ಹಿರೆಕೇರೂರು ತಾಲೂಕಿಗೆ ಹೆಚ್ಚಿನ ಅನುದಾನ ನೀಡಿ‌ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು‌ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. 
ಹಿರೆಕೇರೂರು ತಾಲೂಕು ಅಭಿವೃದ್ಧಿಗೆ ಹೆಚ್ಚಿನ ಅನುದಾನ: ಮುಖ್ಯಮಂತ್ರಿ ಯಡಿಯೂರಪ್ಪ
ಹಿರೆಕೇರೂರು ತಾಲೂಕು ಅಭಿವೃದ್ಧಿಗೆ ಹೆಚ್ಚಿನ ಅನುದಾನ: ಮುಖ್ಯಮಂತ್ರಿ ಯಡಿಯೂರಪ್ಪ

ಹಾವೇರಿ: ಹಿರೆಕೇರೂರು ತಾಲೂಕಿಗೆ ಹೆಚ್ಚಿನ ಅನುದಾನ ನೀಡಿ‌ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು‌ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. 

ಇಂದು ಹಿರೇಕೆರೂರಿನ ಕ್ರೀಡಾಂಗಣದಲ್ಲಿ, ಹಿರೇಕೆರೂರು ಹಾಗೂ ರೆಟ್ಟಿಹಳ್ಳಿ ತಾಲೂಕಿನಲ್ಲಿನ ರಾಜ್ಯ ಸರ್ಕಾರದಿಂದ ಕೈಗೊಳ್ಳಲಾಗಿತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದರು.

ಲೋಕೋಪಯೋಗಿ ಇಲಾಖೆ ವತಿಯಿಂದ 85.19ಕೋಟಿ ವೆಚ್ಚದಲ್ಲಿ 20 ಕಾಮಗಾರಿ, ಜಲಸಂಪನ್ಮೂಲ ಹಾಗೂ ನೀರಾವರಿ ನಿಗಮದಿಂದ 25 ಕೋಟಿ ವೆಚ್ಚದಲ್ಲಿ ತುಂಗಾ ಮೇಲ್ದಂಡೆ ಯೋಜನೆಯ ಕಟ್ ಕವರ್ (ಆರ್ಚ ಟೈಪ್ ) ನಿರ್ಮಾಣ, ಪಂಚಾಯಿತ್ ರಾಜ್ಯ ಇಂಜಿನೀಯರಿಂಗ್ ಇಲಾಖೆಯಿಂದ‌ 9.45 ಕೋಟಿ ವೆಚ್ಚದ 13 ಕಾಮಗಾರಿಗಳು, ಸಮಾಜಕಲ್ಯಾಣ ಇಲಾಖೆಯ ಪರಿಶಿಷ್ಟ ವರ್ಗಗಳ ಇಲಾಖೆಯಿಂದ 1.56 ಕೋಟಿ ವೆಚ್ಚದಲ್ಲಿ ಒಂದು ಕಾಮಾಗರಿಗೆ ಶಂಕು‌ಸ್ಥಾಪನೆ ಸಂಸ್ಥಾಪನೆ ಮಾಡಲಾಗಿದೆ‌. ಈ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುವುದು ಎಂದು‌ ಹೇಳಿದರು.

ಗೃಹ, ಸಹಕಾರ ಮತ್ತು ಕೃಷಿ ಮಾರುಕಟ್ಟೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ, ಕರ್ನಾಟಕ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ, ಜಿ.ಪಂ.ಅಧ್ಯಕ್ಷ ಎಸ್.ಕೆ.ಕರಿಯಣ್ಣನವರ, ಹಾವೇರಿ ಸಂಸದ ಶಿವಕುಮಾರ ಉದಾಸಿ, ಶಿವಮೊಗ್ಗ ಸಂಸದ.ಬಿ.ವೈ.ರಾಘವೇಂದ್ರ, ಹಿರೇಕೆರೂರು ಜಿ.ಪಂ.ಸದಸ್ಯೆ ಗಿರಿಜಮ್ಮ.ಹ ಬ್ಯಾಲದಳ್ಳಿ, ತಾ.ಪಂ.ಅಧ್ಯಕ್ಷ ರಾಜು.ಗ ಬಣಕಾರ, ಉಪಾಧ್ಯಕ್ಷ ಕವಿತಾ ಕ. ಬಿದರಿ, ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಅಮ್ಲಾನ್ ಆದಿತ್ಯ ಬಿಸ್ವಾಸ್‌ ಸೇರಿದಂತೆ ಹಿರಿಯ ಅಧಿಕಾರಿಗಳು, ಸ್ಥಳೀಯ ನಾಯಕರು ಉಪಸ್ಥಿರಿದ್ದರು. ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ವಿದ್ಯಾರ್ಥಿಗಳು ನಾಡಗೀತೆ ಪ್ರಸ್ತತ ಪಡಿಸಿದರು.ಅಪರ ಜಿಲ್ಲಾಧಿಕಾರಿ ಎಲ್ ತಿಪ್ಪೇಸ್ವಾಮಿ ಸ್ವಾಗತಿಸಿದರು.    

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com