ನಾಳೆ ಅಯೋಧ್ಯೆ ತೀರ್ಪು: ಕರ್ನಾಟಕದಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

ಶತಮಾನದ ಹಳೆಯ ವಿವಾದ ಅಯೋಧ್ಯೆ ರಾಮಜನ್ಮಭೂಮಿ ಮತ್ತು ಬಾಬರಿ ಮಸೀದಿ ಪ್ರಕರಣ ಸಂಬಂಧ ಐತಿಹಾಸಿಕ ತೀರ್ಪು ನಾಳೆ ಸುಪ್ರೀಂ ಕೋರ್ಟ್ ಪ್ರಕಟಿಸಲಿರುವುದರಿಂದ ಮುಂಜಾಗೃತ ಕ್ರಮವಾಗಿ ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಶಾಲಾ ಮಕ್ಕಳು
ಶಾಲಾ ಮಕ್ಕಳು

ಬೆಂಗಳೂರು: ಶತಮಾನದ ಹಳೆಯ ವಿವಾದ ಅಯೋಧ್ಯೆ ರಾಮಜನ್ಮಭೂಮಿ ಮತ್ತು ಬಾಬರಿ ಮಸೀದಿ ಪ್ರಕರಣ ಸಂಬಂಧ ಐತಿಹಾಸಿಕ ತೀರ್ಪು ನಾಳೆ ಸುಪ್ರೀಂ ಕೋರ್ಟ್ ಪ್ರಕಟಿಸಲಿರುವುದರಿಂದ ಮುಂಜಾಗೃತ ಕ್ರಮವಾಗಿ ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಹಿಂದೂ-ಮುಸ್ಲಿಂ ಸಮುದಾಯದ ಭಾವನಾತ್ಮಕ ವಿಚಾರ ಇದಾಗಿರುವುದರಿಂದ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತ ಕ್ರಮಕೈಗೊಳ್ಳಲಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. 

ಇನ್ನು ರಾಜ್ಯಾದ್ಯಂತ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com