ಬೆಳೆ ಹಾನಿ, ಪ್ರವಾಹ ಪರಿಹಾರ: ನ.11ರಂದು ರೈತರೊಂದಿಗೆ ಸಿಎಂ ಬಿಎಸ್'ವೈ ಮಾತುಕತೆ

ಪ್ರವಾಹ ಪರಿಣಾಮ ಬೆಳನಾಶಗೊಂಡು ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ನೀಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ನಗರದಲ್ಲಿ ರೈತರು ಗುರುವಾರ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಪ್ರವಾಹ ಪರಿಣಾಮ ಬೆಳನಾಶಗೊಂಡು ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ನೀಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ನಗರದಲ್ಲಿ ರೈತರು ಗುರುವಾರ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. 

ಪರಿಹಾರ ಆಗ್ರಹಿಸಿ ನಿನ್ನೆಯಷ್ಟೇ ನೂರಾರು ಸಂಖ್ಯೆಯಲ್ಲಿ ರೈತರು ನಗರಕ್ಕೆ ಆಗಮಿಸಿ ಪ್ರತಿಭಟನೆ ನಡೆಸಲು ಆರಂಭಿಸಿದ್ದರು, ಬಳಿಕ ಎಚ್ಚೆತ್ತ ಸಿಎಂ ಫೋನ್ ಕರೆ ಮೂಲಕ ರೈತರ ನಾಯಕರೊಂದಿಗೆ ಮಾತನಾಡಿ, ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು. ಬಳಿಕ ರೈತರು ಪ್ರತಿಭಟನೆಯನ್ನು ಹಿಂದಕ್ಕೆ ಪಡೆದುಕೊಂಡಿದ್ದರು. 

ದೂರವಾಣಿ ಕರೆ ಮೂಲಕ ಮುಖ್ಯಮಂತ್ರಿಗಳು ನನ್ನೊಂದಿಗೆ ಮಾತುಕತೆ ನಡೆಸಲಿದರು. ರೈತರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಶ್ರಮ ಪಡುತ್ತಿರುವ ಕುರಿತು ತಿಳಿಸಿದರು. ಶೀಘ್ರಗತಿಯಲ್ಲಿ ಪರಿಹಾರ ಬಿಡುಗಡೆ ಪ್ರಕ್ರಿಯೆ ನಡೆಸುವುದಾಗಿ ಭರವಸೆ ನೀಡಿದರು. ಹೀಗಾಗಿ ಪ್ರತಿಭಟನೆ ಹಿಂಪಡೆಯಲಾಯಿತು ಎಂದು ರೈತರ ಸಂಘ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರು ಹೇಳಿದ್ದಾರೆ. 

ಇದಲ್ಲದೆ, ಪ್ರತಿಭಟನಾನಿರತ ರೈತರನ್ನು ಕಂದಾಯ ಸಚಿವ ಆರ್.ಅಶೋಕ್ ಅವರು ಭೇಟಿ ಮಾಡಿ ಮಾತುಕತೆ ನಡೆಸಿದರು. ಶೀಘ್ರಗತಿಯನ್ನು ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದರು. ಬಳಿಕ ರೈತರು ಪ್ರತಿಭಟನೆ ಹಿಂದಕ್ಕೆ ತೆಗೆದುಕೊಳ್ಳಲು ನಿರ್ಧರಿಸಿದರು. 

ಪ್ರತಿಭಟನೆಯನ್ನು ಪ್ರಸ್ತುತ ಹಿಂಪಡೆದಿದ್ದೇವೆ. ಮುಖ್ಯಮಂತ್ರಿಗಳು ಸೋಮವಾರ ಮಾತುಕತೆ ನಡೆಸಲಿದ್ದು, ಮಾತುಕತೆ ಬಳಿಕ ಮುಂದಿನ ನಿರ್ಧಾರಗಳನ್ನು ಕೈಗೊಳ್ಳುತ್ತೇವೆಂದು ಚಂದ್ರಶೇಖರ್ ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com