ಅನರ್ಹತೆ ಎತ್ತಿ ಹಿಡಿದ ಸುಪ್ರೀಂಕೋರ್ಟ್ ತೀರ್ಪನ್ನು ಕಾಂಗ್ರೆಸ್ ಸ್ವಾಗತಿಸುತ್ತದೆ: ದಿನೇಶ್ ಗುಂಡೂರಾವ್

 ಶಾಸಕರ ಅನರ್ಹತೆಯನ್ನು ಸುಪ್ರೀಂಕೋರ್ಟ್‌ ಎತ್ತಿಹಿಡಿದಿರುವುದರಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ
ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್

ರಾಯಚೂರು:  ಶಾಸಕರ ಅನರ್ಹತೆಯನ್ನು ಸುಪ್ರೀಂಕೋರ್ಟ್‌ ಎತ್ತಿಹಿಡಿದಿರುವುದರಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ರಾಯಚೂರಿನಲ್ಲಿ ಪ್ರತಿಕ್ರಿಯಿಸಿದ ದಿನೇಶ್ ಗುಂಡೂರಾವ್, ಸುಪ್ರೀಂಕೋರ್ಟ್‌ ಸ್ಪೀಕರ್ ಆದೇಶ ಎತ್ತಿ ಹಿಡಿದಿದ್ದು, ನೈತಿಕತೆಗೆ ಗೆಲುವು ಸಿಕ್ಕಿದೆ. ತೀರ್ಪನ್ನು ಕಾಂಗ್ರೆಸ್ ಪಕ್ಷ ಸ್ವಾಗತಿಸುತ್ತದೆ ಎಂದು ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಈ ಸರಕಾರಕ್ಕೆ ಅಧಿಕಾರದಲ್ಲಿ ಉಳಿಯಲು ನೈತಿಕತೆಯಿಲ್ಲ. ಸ್ಪೀಕರ್ ನಿರ್ಧಾರ ಸರಿ ಎಂಬು ದನ್ನು ತೀರ್ಪು ಸ್ಪಷ್ಟವಾಗಿ ಹೇಳಿದೆ. ಕುದುರೆ ವ್ಯಾಪಾರ ನಡೆದಿರುವುದು ಸಾಬೀತಾಗಿದೆ ಎಂದು ಹೇಳಿದರು.

ಶೀಘ್ರ ರಾಷ್ಟ್ರಪತಿ ಭೇಟಿ ಮಾಡಿ ರಾಜ್ಯ ಸರಕಾರದ ವಿರುದ್ಧ ದೂರ ನೀಡಲಾಗುವುದು. ಅಧಿಕಾರದಿಂದ ವಜಾ ಗೊಳಿಸಲು ಒತ್ತಾಯ ಮಾಡಲು ಪಕ್ಷದ ಸಭೆಯಲ್ಲಿ ಈಗಾಗಲೇ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮಾತನಾಡಿ, ಬಿಜೆಪಿಗೆ ನೈತಿಕತೆಯಿದ್ದರೆ ಉಪ ಚುನಾವಣೆಯಲ್ಲಿ ಅನರ್ಹ ಶಾಸಕರಿಗೆ ಸ್ಪರ್ಧೆಗೆ ಅವಕಾಶ ನೀಡಬಾರದು. ಸುಪ್ರೀಂ ಕೋರ್ಟ್ ತೀರ್ಪಿನಿಂದ ಬಿಜೆಪಿ ನಡೆಸಿದ ಕುದುರೆ ವ್ಯಾಪಾರ ಬಯಲಾಗಿದೆ. ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಬಿಜೆಪಿ ಅಧ್ಯಕ್ಷ ಅಮಿತ್ ಷಾ, ಮುಖ್ಯಮಂತ್ರಿ ಯಡಿಯೂರಪ್ಪ ತೀರ್ಪಿನ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಕೇಂದ್ರ ಸರ್ಕಾರ ಪಕ್ಷಾಂತರ ನಿಷೇಧ ಕಾಯಿದೆ ಜಾರಿಗೆ ಈಗಲಾದರೂ ಮುಂದಾಗಬೇಕು. ಅನರ್ಹ ಶಾಸಕರಿಗೆ ಇದು ತಕ್ಕ ಪಾಠವಾಗಿದೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮತದಾರರ ಬೆಂಬಲ ಖಚಿತ. ಮತದಾರ ರಿಂದ ಬಿಜೆಪಿ ಗೆ ಉಪ ಚುನಾವಣೆಯಲ್ಲಿ ಪಾಠ ಕಲಿಸಲಿದ್ದಾರೆ ಎಂದು ಖಂಡ್ರೆ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com