ಅಯೋಧ್ಯೆ ರಾಮ ದೇವಾಲಯ ಟ್ರಸ್ಟ್ ಗೆ ಉಡುಪಿಯ ಪೇಜಾವರ ಶ್ರೀಗಳು 

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಟ್ರಸ್ಟ್ ನಿರ್ಮಿಸಬೇಕೆಂದು ಸುಪ್ರೀಂಕೋರ್ಟ್ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ  ಉಡುಪಿಯ ಪೇಜಾವರ ಮಠದ ವಿಶ್ವೇಶ್ವರ ತೀರ್ಥ ಸ್ವಾಮೀಜಿಗಳನ್ನು ನೇಮಕ ಮಾಡಲಾಗುತ್ತದೆ ಎಂದು ವಿಶ್ವ ಹಿಂದೂ ಪರಿಷತ್ ನ ಮೂಲಗಳು ತಿಳಿಸಿವೆ.
ಪೇಜಾವರ ಶ್ರೀಗಳು
ಪೇಜಾವರ ಶ್ರೀಗಳು

ಮಂಗಳೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಟ್ರಸ್ಟ್ ನಿರ್ಮಿಸಬೇಕೆಂದು ಸುಪ್ರೀಂಕೋರ್ಟ್ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ  ಉಡುಪಿಯ ಪೇಜಾವರ ಮಠದ ವಿಶ್ವೇಶ್ವರ ತೀರ್ಥ ಸ್ವಾಮೀಜಿಗಳನ್ನು ನೇಮಕ ಮಾಡಲಾಗುತ್ತದೆ ಎಂದು ವಿಶ್ವ ಹಿಂದೂ ಪರಿಷತ್ ನ ಮೂಲಗಳು ತಿಳಿಸಿವೆ.

ರಾಮ ಜನ್ಮಭೂಮಿ ಹೋರಾಟದಲ್ಲಿ  ಪೇಜಾವರ ಶ್ರೀಗಳು ಪ್ರಮುಖ ಪಾತ್ರ ವಹಿಸಿದ್ದರು. ವೈಷ್ಣವ ಪಂಥದ ಪ್ರಮುಖ ಶ್ರೀಗಳಾಗಿದ್ದಾರೆ, ಜೊತೆಗೆ ದಕ್ಷಿಣ ಭಾರತದಲ್ಲಿ ಪ್ರಮುಖ ಸ್ವಾಮೀಜಿಗಳಲ್ಲಿ ಒಬ್ಬರಾಗಿರುವ ಕಾರಣ ಅವರನ್ನು ಟ್ರಸ್ಟ್ ಗೆ ನೇಮಕ ಮಾಡಲಾಗುವುದೆಂದು ಹೇಳಲಾಗುತ್ತಿದೆ.

ಇನ್ನೂ ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಪೇಜಾವರ ಶ್ರೀಗಳ ಆಪ್ತ ಸಹಾಯಕ ಸುಬ್ರಮಣ್ಯ, ಶ್ರೀಗಳನ್ನು ಟ್ರಸ್ಟ್ ಗೆ ನೇಮಕ ಮಾಡುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com