ಅಮ್ನೆಸ್ಟಿ ಇಂಟರ್‌ನ್ಯಾಷನಲ್‌ ಬೆಂಗಳೂರು, ದೆಹಲಿ ಕಚೇರಿ ಮೇಲೆ ಸಿಬಿಐ ದಾಳಿ

ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಸಂಸ್ಥೆ ಅಮ್ನೆಸ್ಟಿ ಇಂಟರ್‌ನ್ಯಾಷನಲ್‌ ಸೇರಿದ ಬೆಂಗಳೂರು ಹಾಗೂ ದೆಹಲಿ ಕಚೇರಿಗಳ ಮೇಲೆ ಶುಕ್ರವಾರ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಅಮ್ನೆಸ್ಟಿ ಇಂಟರ್ ನ್ಯಾಷನಲ್
ಅಮ್ನೆಸ್ಟಿ ಇಂಟರ್ ನ್ಯಾಷನಲ್

ಬೆಂಗಳೂರು: ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಸಂಸ್ಥೆ ಅಮ್ನೆಸ್ಟಿ ಇಂಟರ್‌ನ್ಯಾಷನಲ್‌ ಸೇರಿದ ಬೆಂಗಳೂರು ಹಾಗೂ ದೆಹಲಿ ಕಚೇರಿಗಳ ಮೇಲೆ ಶುಕ್ರವಾರ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಅಮ್ನೆಷ್ಟಿ ಸಂಸ್ಥೆ ವಿದೇಶಿ ಕೊಡುಗೆಗಳ ನಿಯಂತ್ರಣ ಕಾಯ್ದೆ(ಎಫ್ ಸಿಆರ್ ಎ) ಉಲ್ಲಂಘಿಸಿ ಭಾರೀ ಮೊತ್ತದ ದೇಣಿಗೆ ಸಂಗ್ರಹಿಸಿದೆ ಎಂಬ ಆರೋಪ ಎದುರಿಸುತ್ತಿದ್ದು, ಈ ಸಂಬಂಧ ಸಿಬಿಐ ದಿಢೀರ್​​ ದಾಳಿ ನಡೆಸಿ ಕಡತಗಳ ಪರಿಶೀಲನೆ ನಡೆಸುತ್ತಿದೆ.

ಇದೇ ಪ್ರಕರಣ ಸಂಬಂಧ ಕಳೆದ ವರ್ಷ ಅಕ್ಟೋಬರ್​​​ 25 ರಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಅಮ್ನೆಸ್ಟಿ ಕಚೇರಿ ಮೇಲೆ ದಾಳಿ ನಡೆಸಿದ್ದರು. ಅಲ್ಲದೆ ವಿದೇಶಿ ಕೊಡುಗೆಗಳ ನಿಯಂತ್ರಣ ಕಾಯ್ದೆ ಉಲ್ಲಂಘಿಸಿರುವ ಅಮ್ನೆಷ್ಟಿ ಸಂಸ್ಥೆ ಭಾರೀ ಮೊತ್ತದ ದೇಣಿಗೆ ಸಂಗ್ರಹಿಸಿದೆ ಎಂದು ಆರೋಪಿಸಿತ್ತು.

ಅಮ್ನೆಸ್ಟಿ ಸಂಸ್ಥೆಗೆ ಅಕ್ರಮವಾಗಿ ವಿದೇಶದಿಂದ 36 ಕೋಟಿ ಹಣ ವರ್ಗಾವಣೆಯಾಗಿದೆ. ಇದರಲ್ಲಿ 10 ಕೋಟಿಯನ್ನು ದೀರ್ಘಾವಧಿ ಸಾಲವಾಗಿ ಪಡೆಯಲಾಗಿದೆ. ಹಾಗಾಗಿಯೇ ಅಮ್ನೆಸ್ಟಿ ಸಂಸ್ಥೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು ಎನ್ನಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com