ಹುಣಸೂರು: ಲಾರಿ ಕಾರು ಢಿಕ್ಕಿ, ಇಬ್ಬರು ಸಾವು

 ಜಿಲ್ಲೆಯ ಹುಣಸೂರು ತಾಲ್ಲೂಕಿನ ಚಿಕುಂಡಾ ಗ್ರಾಮದ ಬಳಿ ಭಾನುವಾರ ಕಾರೊಂದು ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇತರ ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಚಿಕುಂಡಾ ಗ್ರಾಮದ ಬಳಿ ಭಾನುವಾರ ಕಾರೊಂದು ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇತರ ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನತದೃಷ್ಟರು ಚೆನ್ನೈ ಮೂಲದವರಾಗಿದ್ದು, ಇನ್ನೂ ಗುರುತು ಪತ್ತೆಯಾಗಿಲ್ಲ. ಗಾಯಾಳುಗಳನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಭಾನುವಾರ ಮುಂಜಾನೆ ೬.೧೫ರ ಸುಮಾರಿಗೆ ಚಿಕುಂಡಾ ಗ್ರಾಮದ ಸಂಡೇ ಕೆರೆ ತಿರುವಿನಲ್ಲಿ ಅಪಘಾತ ಸಂಭವಿಸಿದೆ/ಹುಣಸೂರಿನಿಂದ ಪಿರಿಯಾಪಟ್ಟಣಕ್ಕೆ ತೆರಳುತ್ತಿದ್ದ ಲಾರಿ ಎದುರಿನಿಂದ ಬರುತ್ತಿದ್ದ ಕಾರಿಗ ಢಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರ ಪೈಕಿ ಇಬ್ಬರು ಮೃತಪಟ್ಟಿದ್ದಾರೆ. 

ಘಟನೆ ಮಾಹಿತಿ ಪಡೆದ ಹುಣಸೂರು ಗ್ರಾಮಾಂತರ ಠಣೆ ಪೋಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com