ಕೆಟ್ಟು ನಿಂತ ಲಾರಿಗೆ ಬೈಕ್ ಡಿಕ್ಕಿ: ತಮ್ಮ ಸಾವು, ಸಹೋದರಿಗೆ ಗಂಭೀರ ಗಾಯ

ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್​ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಮರಿಯಾಲ ಮೇಲ್ಸೇತುವೆ ಬಳಿ ನಡೆದಿದೆ.
ಅಪಘಾತದ ದೃಶ್ಯ
ಅಪಘಾತದ ದೃಶ್ಯ

ಚಾಮರಾಜನಗರ: ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್​ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಮರಿಯಾಲ ಮೇಲ್ಸೇತುವೆ ಬಳಿ ನಡೆದಿದೆ.

ಚಾಮರಾಜನಗರ ತಾಲೂಕಿನ‌ ಕಾಳಿಹುಂಡಿ ಗ್ರಾಮದ ಬಸವರಾಜು (30) ಮೃತ ದುರ್ದೈವಿ. ಅಪಘಾತದಲ್ಲಿ ಮೃತರ ಅಕ್ಕ ಮಣಿ ಗಾಯಗೊಂಡಿದ್ದು, ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಬಸವರಾಜೇಂದ್ರ ಆಸ್ಪತ್ರೆಯಲ್ಲಿ ನರ್ಸ್​ ಆಗಿ ಕಾರ್ಯನಿರ್ವಹಿಸುತ್ತಿದ್ದ ತಮ್ಮ ಅಕ್ಕನನ್ನು ಮನೆಗೆ ಕರೆತರುವಾಗ ಕೆಟ್ಟು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಬಸವರಾಜು ಸಾವನ್ನಪ್ಪಿದ್ದಾರೆ. ಈ ಸಂಬಂಧ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ: ಗೂಳಿಪುರ ನಂದೀಶ ಎಂ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com