ಬೆಂಗಳೂರು: ಜಿಕೆವಿಕೆ ಸಂಶೋಧನಾ ವಿದ್ಯಾರ್ಥಿನಿ ಆತ್ಮಹತ್ಯೆ

ಗೆಳೆಯನೊಂದಿಗೆ ಸಹಜೀವನ ನಡೆಸುತ್ತಿದ್ದ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ (ಜಿಕೆವಿಕೆ) ಸಂಶೋಧನಾ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.

Published: 18th November 2019 06:00 PM  |   Last Updated: 18th November 2019 06:00 PM   |  A+A-


ಸಂಗ್ರಹ ಚಿತ್ರ

Posted By : Raghavendra Adiga
Source : UNI

ಬೆಂಗಳೂರು: ಗೆಳೆಯನೊಂದಿಗೆ ಸಹಜೀವನ ನಡೆಸುತ್ತಿದ್ದ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ (ಜಿಕೆವಿಕೆ) ಸಂಶೋಧನಾ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.

ಉತ್ತರ ಪ್ರದೇಶ ಮೂಲದ ಪ್ರಸನ್ನ ತ್ರಿಪಾಠಿ (25) ಆತ್ಮಹತ್ಯೆಗೆ ಶರಣಾದವರು.

ಅವರು ಜಿಕೆವಿಕೆಯಲ್ಲಿ ಡಾಕ್ಟರೇಟ್ ಸಂಶೋಧನಾ ವಿದ್ಯಾರ್ಥಿಯಾಗಿದ್ದರು. ಕೊಡಿಗೆಹಳ್ಳಿಯ ಕೆನರಾ ಬ್ಯಾಂಕ್‌ಲೇಔಟ್‌ನ ಮಾರುತಿ ನಗರದಲ್ಲಿ ಬಾಡಿಗೆ ಮನೆಯಲ್ಲಿ ಸಹಪಾಠಿ ತಮಿಳುನಾಡಿನ ಡಾಕ್ಟರೇಟ್ ವಿದ್ಯಾರ್ಥಿಯೊಂದಿಗೆ ಒಟ್ಟಾಗಿ ನೆಲೆಸಿದ್ದರು. ಗೆಳೆಯ ಮೂರು ದಿನಗಳ ಹಿಂದೆ ಊರಿಗೆ ಹೋಗಿದ್ದರು. 

ಕಾಲೇಜಿಗೆ ರಜೆ ಇದ್ದ ಕಾರಣ ಮನೆಯಲ್ಲೇ ಉಳಿದಿದ್ದ ಪ್ರಸನ್ನ ರಾತ್ರಿ ಹತ್ತು ಗಂಟೆ ಸುಮಾರಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಹಜೀವನ ನಡೆಸುತ್ತಿದ್ದ ಗೆಳೆಯನೊಂದಿಗಿನ ಮನಸ್ತಾಪವೇ ಣಿ ಘಟನೆಗೆ ಕಾರಣವೆಂದು ಶಂಕೆ ವ್ಯಕ್ತವಾಗಿದೆ.

ಆತ್ಮಹತ್ಯೆಗೆ ಮುನ್ನ ಪ್ರಸನ್ನ ಅವರು ಡೆತ್ ನೋಟ್ ಬರೆದಿದ್ದು "ನನ್ನ ಸಾವಿಗೆ ಯಾರೂ ಕಾರಣವಲ್ಲ!" ಎಂದು ಉಲ್ಲೇಖಿಸಿದ್ದಾರೆ. ಇದೀಗ ಆಕೆಯ ಗೆಳೆಯ ತಮಿಳುನಾಡು ಮೂಲದ ವಿದ್ಯಾರ್ಥಿಯನ್ನು ಕರೆಸಿ ಪೋಲೀಸರು ವಿಚಾರಣೆ ಪ್ರಾರಂಭಿಸಿದ್ದಾರೆ. ಕೋಡಿಗೆಹಳ್ಳಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Stay up to date on all the latest ರಾಜ್ಯ news
Poll
RBI

ಕಾರ್ಪೊರೇಟ್‌ ಕಂಪನಿಗಳಿಗೆ ಬ್ಯಾಂಕ್‌ ಆರಂಭಿಸಲು ಅನುಮತಿಸುವಂತೆ ಕೇಂದ್ರ ಸರ್ಕಾರಕ್ಕೆ ಆರ್ ಬಿಐ ನೀಡಿರುವ ಸಲಹೆಯನ್ನು ಸ್ವಾಗತಿಸುತ್ತೀರಾ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp