ಅಯೋಧ್ಯೆ ತೀರ್ಪು: ನ್ಯಾಯಾಧೀಶ ಎಸ್.ಅಬ್ದುಲ್ ನಜೀರ್ ಗೆ ಝೆಡ್ ಭದ್ರತೆ

ಅಯೋಧ್ಯಾ ಪ್ರಕರಣದ ತೀರ್ಪು ಪ್ರಕಟಿಸಿದ ಸುಪ್ರೀಂಕೋರ್ಟಿನ ಪಂಚ ಸದಸ್ಯ ಪೀಠದ ಸದಸ್ಯರಾದ ನ್ಯಾ ಎಸ್‌.ಅಬ್ದುಲ್ ನಜೀರ್ ಅವರ ಕುಟುಂಬ ಸದಸ್ಯರಿಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯಿಂದ ಜೀವ ಬೆದರಿಕೆ ಇದೆ ಎನ್ನಲಾಗಿದೆ.
ಅಜ್ದುಲ್ ನಜೀರ್
ಅಜ್ದುಲ್ ನಜೀರ್

ಬೆಂಗಳೂರು: ಅಯೋಧ್ಯಾ ಪ್ರಕರಣದ ತೀರ್ಪು ಪ್ರಕಟಿಸಿದ ಸುಪ್ರೀಂಕೋರ್ಟಿನ ಪಂಚ ಸದಸ್ಯ ಪೀಠದ ಸದಸ್ಯರಾದ ನ್ಯಾ ಎಸ್‌.ಅಬ್ದುಲ್ ನಜೀರ್ ಅವರ ಕುಟುಂಬ ಸದಸ್ಯರಿಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯಿಂದ ಜೀವ ಬೆದರಿಕೆ ಇದೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನ್ಯಾ.ಅಬ್ದುಲ್ ನಜೀರ್ ಅವರಿಗೆ ಝಡ್ ಶ್ರೇಣಿಯ ಭದ್ರತೆ ಕಲ್ಪಿಸಲು ನಿರ್ಧರಿಸಿದೆ.

ನ್ಯಾ. ನಜೀರ್‌ ಮತ್ತು ಕರ್ನಾಟಕದಲ್ಲಿ ಇರುವ ಅವರ ಕುಟುಂಬ ಸದಸ್ಯರಿಗೆ ಭದ್ರತೆ ಒದಗಿಸುವಂತೆ ಮೀಸಲು ಪಡೆ ಮತ್ತು ಸ್ಥಳೀಯ ಪೊಲೀಸರಿಗೆ ಗೃಹ ಸಚಿವಾಲಯ ಸೂಚನೆ ನೀಡಿದೆ.

ನಜೀರ್‌ ಅವರು ಬೆಂಗಳೂರು, ಮಂಗಳೂರು ಹಾಗೂ ಇತರ ಕಡೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಕರ್ನಾಟದ ಕೋಟಾದಿಂದ ‘ಝಡ್‌’ ಶ್ರೇಣಿ ಭದ್ರತೆ ನೀಡಲಾಗುತ್ತದೆ, ಅದೇ ರೀತಿ ಬೆಂಗಳೂರು ಹಾಗೂ ಮಂಗಳೂರಿನಲ್ಲಿ ನೆಲೆಸಿರುವ ಅವರ ಕುಟುಂಬ ಸದಸ್ಯರಿಗೂ ವಿಸ್ತರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ,

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com