ಬಿಜೆಪಿ ಮುಖಂಡನ ಕೊಲೆ ಪ್ರಕರಣ: ಕಲಬುರಗಿ ಜಿ.ಪಂ. ಸದಸ್ಯನ ಬಂಧನ

ಇತ್ತೀಚೆಗೆ ನಡೆದ ಬಿಜೆಪಿ ಮುಖಂಡ ಹಾಗೂ ಗುತ್ತಿಗೆದಾರ ಶಿವಲಿಂಗ ಬಾವಿಕಟ್ಟಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಜೇವರ್ಗಿ ತಾಲೂಕಿನ ಇಜೇರಿ ಜಿಲ್ಲಾ ಪಂಚಾಯತ್ ಕಾಂಗ್ರೆಸ್ ಸದಸ್ಯ ಶಾಂತಪ್ಪ ಕೂಡ್ಲಗಿ ಹಾಗೂ ಅವರ ಸಹೋದರನನ್ನು ಪೊಲೀಸರು ಬಂಧಿಸಿದ್ದಾರೆ.
ಶಾಂತಪ್ಪ ಕೂಡ್ಲಗಿ
ಶಾಂತಪ್ಪ ಕೂಡ್ಲಗಿ

ಕಲಬುರಗಿ: ಇತ್ತೀಚೆಗೆ ನಡೆದ ಬಿಜೆಪಿ ಮುಖಂಡ ಹಾಗೂ ಗುತ್ತಿಗೆದಾರ ಶಿವಲಿಂಗ ಬಾವಿಕಟ್ಟಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಜೇವರ್ಗಿ ತಾಲೂಕಿನ ಇಜೇರಿ ಜಿಲ್ಲಾ ಪಂಚಾಯತ್ ಕಾಂಗ್ರೆಸ್ ಸದಸ್ಯ ಶಾಂತಪ್ಪ ಕೂಡ್ಲಗಿ ಹಾಗೂ ಅವರ ಸಹೋದರನನ್ನು ಪೊಲೀಸರು ಬಂಧಿಸಿದ್ದಾರೆ.

ಜಿಲ್ಲಾ ಪಂಚಾಯತ್ ಸದಸ್ಯ ಶಾಂತಪ್ಪ ಕೂಡ್ಲಗಿ ಮತ್ತು ಅವರ ಸಹೋದರ ಹಣಮಂತ ಕೂಡ್ಲಗಿಯನ್ನು ಇಂದು ಬಂಧಿಸಲಾಗಿದೆ‌.

ಕಳೆದ ನವೆಂಬರ್ 05 ರಂದು ಬಾವಿಕಟ್ಟಿ ಅವರ ಕಾರಿಗೆ ಮತ್ತೊಂದು ಕಾರಿನಿಂದ ಡಿಕ್ಕಿ ಹೊಡೆಸಿ, ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಐದು ಜನ ಆರೋಪಿಗಳನ್ನು ಬಂಧಿಸಿದ್ದರು.

ಪ್ರಕರಣದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಶಾಂತಪ್ಪ ಕೂಡಲಗಿ ಹಾಗೂ ಆತನ ಸಹೋದರ ಹನುಮಂತ ಕೂಡಲಗಿ ಹೆಸರು ಸಹ ಕೇಳಿ ಬಂದಿತ್ತು. ಹೀಗಾಗಿ ಇಬ್ಬರೂ ತಲೆಮರೆಸಿಕೊಂಡಿದ್ದರು.

ಈ ನಡುವೆ ಶಾಂತಪ್ಪ ಕೂಡಲಗಿ ಅವರ ತಾಯಿ ಸಾಬವ್ವ ನಿನ್ನೆ ನಿಧನರಾದ ಹಿನ್ನಲೆ ಅಜ್ಞಾತ ಸ್ಥಳದಲ್ಲಿದ್ದ ಸಹೋದರಿಬ್ಬರಿಗೆ ಹೊರಬರುವುದು ಅನಿವಾರ್ಯವಾಗಿತ್ತು. ನಿರೀಕ್ಷೆಯಂತೆ ನಿನ್ನೆ ಅಂತ್ಯಕ್ರಿಯೆಗೆ ಬಂದಿದ್ದ ಸಹೋದರರರಿಬ್ಬರನ್ನು ಜೇವರ್ಗಿ ತಾಲೂಕಿನ ಕೂಡಲಗಿ ಗ್ರಾಮದಲ್ಲಿ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.

ಈ ಸಂಬಂಧ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com