ಲೈಂಗಿಕ ಕಿರುಕುಳ: ದೂರದರ್ಶನ ಹಿರಿಯ ಆಧಿಕಾರಿ ವಿರುದ್ಧ ದೂರು ದಾಖಲು

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿ, ಆ್ಯಸಿಡ್ ಹಾಕುವುದಾಗಿ ಬೆದರಿಕೆವೊಡ್ಡಿರುವ ಆರೋಪದ ಮೇಲೆ ದೂರದರ್ಶನ ಕೇಂದ್ರದ ಹಿರಿಯ ಅಧಿಕಾರಿಯೊಬ್ಬರ ವಿರುದ್ಧ ಆರ್.ಟಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿ, ಆ್ಯಸಿಡ್ ಹಾಕುವುದಾಗಿ ಬೆದರಿಕೆವೊಡ್ಡಿರುವ ಆರೋಪದ ಮೇಲೆ ದೂರದರ್ಶನ ಕೇಂದ್ರದ ಹಿರಿಯ ಅಧಿಕಾರಿಯೊಬ್ಬರ ವಿರುದ್ಧ ಆರ್.ಟಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 

30 ವರ್ಷದ ಮಹಿಳೆ ಕೊಟ್ಟ ದೂರಿನ ಮೇರೆಗೆ ದೂರದರ್ಶನ ಕೇಂದ್ರದ ಹಿರಿಯ ಅಧಿಕಾರಿ ರಾಮಕೃಷ್ಣ ಎಂಬುವರ ವಿರುದ್ಧ ಎಫ್ಐಆರ್ ದಾಖಲಾಗಿದೆ. 

ಆರೋಪಿ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. 
 
ಕೆಲ ದಿನಗಳ ಹಿಂದೆ ಸಂತ್ರಸ್ತೆ ಕೆಲಸ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದಾಗ ಹೆಚ್ಎಂಟಿ ಬಡಾವಣೆಯಲ್ಲಿ ಅಡ್ಡಗಟ್ಟಿದ ಆರೋಪಿ, ನೀನು ನನಗೆ ಬೇಕು ಎಂದು ಸಂತ್ರಸ್ತೆಯ ಕೈ-ಕಾಲು, ಅಂಗಾಂಗಗಳನ್ನು ಸ್ಪರ್ಶಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ವೇಳೆ ಸಂತ್ರಸ್ತೆ ಸಹಾಯಕ್ಕಾಗಿ ಚೀರಾಡಿದ್ದು, ಸಾರ್ವಜನಿಕರು ಸೇರುತ್ತಿದ್ದಂತೆಯೇ ಆರೋಪಿ ಪರಾರಿಯಾಗಿದ್ದಾನೆ. ಅಲ್ಲದೆ, ಮಹಿಳೆಗೆ ಆಗಾಗ ದೂರವಾಣಿ ಕರೆ ಮಾಡಿ ತೊಂದರೆ ನೀಡಲು ಆರಂಭಿಸಿದ್ದಾನೆ. 

ಈ ಸಂಬಂಧ ದೂರದರ್ಶನ ವಿಚಾರಣಾ ಸಮಿತಿಗೂ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಅ.14ರಂದು ನ್ಯಾಯಾಂಗ ಬಡಾವಣೆಯಲ್ಲಿ ಸಂತ್ರಸ್ತೆಯನ್ನು ಅಡ್ಡಗಟ್ಟಿ, ನಾನು ನಿನ್ನೆ ಹಿರಿಯ ಅಧಿಕಾರಿ ನನ್ನ ಮಾತು ನಿರಾಕರಿಸಿದರೆ ಮುಖದ ಮೇಲೆ ಆ್ಯಸಿಡ್ ಹಾಕುವುದಾಗಿ ಬೆದರಿ ಹಾಕಿ ಮಾನಸಿಕವಾಗಿ ಕಿರುಕುಳ ನೀಡಿದ್ದ ಎಂದು ಸಂತ್ರಸ್ತೆ ದೂರಿನಲ್ಲಿ ಹೇಳಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com