ಬೆಂಗಳೂರು: ಬರ್ತ್ ಡೇ ಪಾರ್ಟಿ ನಂತರ ಇಬ್ಬರ ಸಾವು; ಗಾಂಜಾ ಸೇವನೆ ಶಂಕೆ

ಹುಟ್ಟುಹಬ್ಬದ ಪಾರ್ಟಿಯಲ್ಲಿ ಗಾಂಜಾ ಸೇವನೆ ಮಾಡಿದ್ದರಿಂದ ಯುವಕರಿಬ್ಬರೂ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ.
ಮೃತ ಯುವಕರು
ಮೃತ ಯುವಕರು

ಬೆಂಗಳೂರು: ಹುಟ್ಟುಹಬ್ಬದ ಪಾರ್ಟಿಯಲ್ಲಿ ಗಾಂಜಾ ಸೇವನೆ ಮಾಡಿದ್ದರಿಂದ ಯುವಕರಿಬ್ಬರೂ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ.

ಅಭಿಲಾಷ್​, ಗೋಪಿ ಎಂಬ ಯುಕವರು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದು, ಸುಮನ್ ಅಲಿಯಾಸ್ ಚಿಟ್ಟೆ ಎಂಬಾತನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. 

ಮಲ್ಲೇಶ್ವರಂ ಕೋದಂಡರಾಮಪುರದಲ್ಲಿ ಈ ಘಟನೆ ನಡೆದಿದೆ. ಪಾರ್ಟಿ ಮುಗಿಸಿ ಬಂದ ಅಭಿಲಾಷ್, ಗೋಪಿ ದುರ್ಮರಣ ಹೊಂದಿದ್ದು, ಮತ್ತೊಬ್ಬ ಯುವಕ ಕೂಡ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಆದರೆ ಈ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ. ಹುಟ್ಟುಹಬ್ಬದ ಪಾರ್ಟಿಗೆ ಹೋಗಿದ್ದ ಚಿಟ್ಟೆ ಅಲಿಯಾಸ್ ಸುಮನ್ ಸೇರಿದಂತೆ 6 ಮಂದಿ ಯುವಕರ ಸ್ಥಿತಿ ಗಂಭೀರವಾಗಿದೆ.

ಈ ಯುವಕರು ಮಂಗಳವಾರ ಗೆಳೆಯನ ಹುಟ್ಟುಹಬ್ಬದ ಪಾರ್ಟಿ ಮಾಡಿದ್ದರು. ಹುಟ್ಟುಹಬ್ಬದ ಸೆಲೆಬ್ರೇಷನ್ ಅಂತ ಯುವಕರು ಗಾಂಜಾ ಸೇವನೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ತಡರಾತ್ರಿವರೆಗೂ ಪಾರ್ಟಿ ಮಾಡಿ ಮನೆಗೆ ತೆರೆಳಿದ್ದ ಯುವಕರು ಅಸ್ವಸ್ಥಗೊಂಡಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ದುರಾದೃಷ್ಟವಶಾತ್ ಈ ಯುವಕರಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಈ ಸಂಬಂಧ ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ವರದಿಯಲ್ಲಿ ಸಾವಿನ ರಹಸ್ಯ ಹೊರಬೀಳಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com