ಬಂಡೀಪುರ: ಬ್ರಿಡ್ಜ್​ನಿಂದ ಕೆಳಗುರುಳಿದ ಲಾರಿ, ಇಬ್ಬರು ಬೈಕ್​ ಸವಾರರು ಸೇರಿ ಮೂವರು ಸಾವು

ಪ್ಲೈವುಡ್​ ಶೀಟ್​ಗಳನ್ನು ಹೊತ್ತೊಯ್ಯುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಬ್ರಿಡ್ಜ್ ಮೇಲಿಂದ ಕೆಳಗೆ ಚಲಿಸುತ್ತಿದ್ದ ಬೈಕ್​ ಮೇಲೆ ಬಿದ್ದ ಪರಿಣಾಮ ಲಾರಿ ಚಾಲಕ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತಕ್ಕೀಡಾದ ಲಾರಿ
ಅಪಘಾತಕ್ಕೀಡಾದ ಲಾರಿ

ಚಾಮರಾಜನಗರ: ಪ್ಲೈವುಡ್​ ಶೀಟ್​ಗಳನ್ನು ಹೊತ್ತೊಯ್ಯುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಬ್ರಿಡ್ಜ್ ಮೇಲಿಂದ ಕೆಳಗೆ ಚಲಿಸುತ್ತಿದ್ದ ಬೈಕ್​ ಮೇಲೆ ಬಿದ್ದ ಪರಿಣಾಮ ಲಾರಿ ಚಾಲಕ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬಂಡೀಪುರ ಸಮೀಪದ ಮೇಲುಕಾಮನಹಳ್ಳಿ ಬಳಿ ಈ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಾದ ಶಿವಪುರದ ಶಿವಪ್ಪ, ಕಾಳಪ್ಪ ಹಾಗೂ ಲಾರಿ ಚಾಲಕ ಈಶ್ಚರಪ್ಪ ಮೃತಪಟ್ಟ ದುರ್ದೈವಿಗಳು.

ಫ್ಲೈವುಡ್ ಶೀಟ್​ಗಳನ್ನು ಕೊಂಡೊಯ್ಯುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದರಿಂದ ಈ ಅವಘಡ ಸಂಭವಿಸಿದೆ. ಲಾರಿ ಬ್ರಿಡ್ಜ್ ಕೆಳಗೆ ಬಿದ್ದು ನಜ್ಜುಗುಜ್ಜಾಗಿದ್ದು, ಚಾಲಕನ ದೇಹವನ್ನು ಹೊರತೆಗೆಯಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಸ್ಥಳಕ್ಕೆ ಎಸ್ಪಿ, ಡಿವೈಎಸ್ಪಿ ಭೇಟಿ ನೀಡಿದ್ದು ಗುಂಡ್ಲುಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

-ಗೂಳಿಪುರ ನಂದೀಶ ಎಂ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com