ಕಲಬುರಗಿ ವಿಮಾನ ನಿಲ್ದಾಣ ಸರಕು ಸಾಗಾಣಿಕೆಗೂ ಬಳಸುವಂತೆ ಕೇಂದ್ರಕ್ಕೆ ಮನವಿ: ಸಿಎಂ ಯಡಿಯೂರಪ್ಪ

ಬಹುದಿನಗಳ ಬೇಡಿಕೆಯಾದ ಕಲಬುರಗಿ ವಿಮಾನ ನಿಲ್ದಾಣದ ಕನಸು ಸಾಕಾರಗೊಂಡಿದ್ದು, ಭವಿಷ್ಯದಲ್ಲಿ ಈ ವಿಮಾನ ನಿಲ್ದಾಣವನ್ನು ಸರಕು ಸಾಗಾಣಿಕೆಗೂ ಬಳಕೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಶುಕ್ರವಾರ ಹೇಳಿದ್ದಾರೆ.
ಬಿ.ಎಸ್.ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ

ಕಲಬುರಗಿ: ಬಹುದಿನಗಳ ಬೇಡಿಕೆಯಾದ ಕಲಬುರಗಿ ವಿಮಾನ ನಿಲ್ದಾಣದ ಕನಸು ಸಾಕಾರಗೊಂಡಿದ್ದು, ಭವಿಷ್ಯದಲ್ಲಿ ಈ ವಿಮಾನ ನಿಲ್ದಾಣವನ್ನು ಸರಕು ಸಾಗಾಣಿಕೆಗೂ ಬಳಕೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಶುಕ್ರವಾರ ಹೇಳಿದ್ದಾರೆ.

ಕಲಬುರಗಿ ವಿಮಾನ ನಿಲ್ದಾಣ ಲೋಕಾರ್ಪಣೆಗೊಳಿಸಿ ಮಾತನಾಡಿದ ಸಿಎಂ, ಈ ವಿಮಾನ ನಿಲ್ದಾಣ ಪ್ರಯಾಣಿಕರ ಸಾಗಾಟಕ್ಕೆ ಮಾತ್ರ ಬಳಕೆಯಾದರೆ ಸಾಲದು. ಬದಲಿಗೆ ವಾಣಿಜ್ಯ ಉದ್ದೇಶಕ್ಕೂ ಬಳಕೆಯಾಗಬೇಕು. ಒಟ್ಟು 3.175 ಕಿ.ಮಿ. ಉದ್ದದ ರನ್ ವೇ ಹೊಂದಿರುವ ಕಲಬುರಗಿ ವಿಮಾನ ನಿಲ್ದಾಣ ರಾಜ್ಯದ 2ನೇ ಹಾಗೂ ದೇಶದ 10ನೇ ಅತಿ ಉದ್ದದ ರನ್ ವೇ ಹೊಂದಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಇಂತಹ ವಿಮಾನ ಸರ್ವ ರೀತಿಯಲ್ಲೂ ಸದ್ಬಳಕೆಯಾಗಬೇಕು ಎಂದರು.

ದೇಶಕ್ಕೆ ಅಗತ್ಯವಾಗಿರುವ ಶೇ.30 ರಷ್ಟು ತೊಗರಿ ಉತ್ಪಾದಿಸುವ ಮತ್ತು ಸಿಮೆಂಟ್ ರಫ್ತಿನಿಂದ ಕಲಬುರಗಿ ಜಿಲ್ಲೆ ವಿಶ್ವದಾದ್ಯಂತ ಗಮನ ಸೆಳೆದಿದೆ. ಹೀಗಾಗಿ ಇಲ್ಲಿನ ವಿಮಾನ ನಿಲ್ದಾಣವನ್ನು ಭವಿಷ್ಯದಲ್ಲಿ ಸರಕು ಸಾಗಣೆಗೂ ಬಳಸಿಕೊಳ್ಳುವಂತೆ ನಾನು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತೇನೆ ಎಂದರು.

ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಿಎಂ ಬಿಎಸ್​ವೈ ಜೊತೆಗೆ ಗೃಹ ಸಚಿವ ಬಸವರಾಜ್​ ಬೊಮ್ಮಾಯಿ, ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ, ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುರಳೀಧರ ರಾವ್, ಸಂಸದ ಉಮೇಶ್ ಜಾಧವ್ ಮತ್ತಿತರರು ಭಾಗಿಯಾಗಿದ್ದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com