ಶಾಸನಕ ಪುತ್ರ ಎಂದು ಹೇಳಿಕೊಂಡು ಒಂಟಿ ಮಹಿಳೆಯರ ಮೇಲೆ ಅತ್ಯಾಚಾರ, ಲೂಟಿ: ಆರೋಪಿ ಬಂಧನ

ಶಾಸಕನ ಪುತ್ರನೆಂದು ಹೇಳಿಕೊಂಡು ಒಂಟಿ ಮಹಿಳೆಯರನ್ನು ಪರಿಚಯ ಮಾಡಿಕೊಂಡು ಬಳಿಕ ಅವರನ್ನು ಅಪಹರಿಸಿ ಅತ್ಯಾಚಾರವೆಸಗಿ, ಚಿನ್ನಾಭರಣ ದೋಚುತ್ತಿದ್ದ ಕುಖ್ಯಾತ ಕಾಮುಕನನ್ನು ಹಲಸೂರು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

Published: 22nd November 2019 06:18 PM  |   Last Updated: 22nd November 2019 06:18 PM   |  A+A-


bng1

ಬಂಧಿತ ಆರೋಪಿ

Posted By : lingaraj
Source : UNI

ಬೆಂಗಳೂರು: ಶಾಸಕನ ಪುತ್ರನೆಂದು ಹೇಳಿಕೊಂಡು ಒಂಟಿ ಮಹಿಳೆಯರನ್ನು ಪರಿಚಯ ಮಾಡಿಕೊಂಡು ಬಳಿಕ ಅವರನ್ನು ಅಪಹರಿಸಿ ಅತ್ಯಾಚಾರವೆಸಗಿ, ಚಿನ್ನಾಭರಣ ದೋಚುತ್ತಿದ್ದ ಕುಖ್ಯಾತ ಕಾಮುಕನನ್ನು ಹಲಸೂರು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ತಮಿಳುನಾಡಿನ ತಿರುಚಿಯ ಶ್ರೀರಂಗಂನ ನಿವಾಸಿ ಜಹಂಗೀರ್(30) ಬಂಧಿತ ಎಂಬಿಎ ಪದವೀಧರ. ಈತನಿಂದ ಕೃತ್ಯಕ್ಕೆ ಬಳಸುತ್ತಿದ್ದ ಸ್ಕೋಡಾ ಕಾರು, ಮೊಬೈಲ್, ಹ್ಯಾಂಡ್ ಬ್ಯಾಗ್‌ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೂರ್ವವಿಭಾಗದ ಡಿಸಿಪಿ ಡಾ. ಎಸ್.ಟಿ. ಶರಣಪ್ಪ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಐಷಾರಾಮಿ ಕಾರಿನಲ್ಲಿ ಶ್ರೀಮಂತರ ವೇಷಭೂಷಣದೊಂದಿಗೆ ಬರುವ ಆರೋಪಿ, ಒಂಟಿ ಮಹಿಳೆಯರನ್ನು ಪರಿಚಯ ಮಾಡಿಕೊಂಡು ಈ ಕೃತ್ಯವೆಸಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಜಹಂಗೀರ್ 2017ರಿಂದ ಮಹಿಳೆಯರಿಗೆ ವಂಚಿಸುತ್ತಿದ್ದಾನೆ. ಈವೆರೆಗೆ ಈತನ ವಿರುದ್ಧ ಐದು ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ.

ಮಾಡೆಲಿಂಗ್‌ ಮತ್ತು ನಟಿಯನ್ನಾಗಿ ಮಾಡಿಸುತ್ತೇನೆಂದು ಸುಲಿಗೆ ಮತ್ತು ಲೈಂಗಿಕ ಕೃತ್ಯಕ್ಕೆ ಬಳಸಿಕೊಂಡಿದ್ದಾನೆ. ಅಲ್ಲದೆ, ಡ್ರಾಪ್‌ ಮಾಡುವ ನೆಪದಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಮೀಡಿಯಾ ಮತ್ತು ಅಡ್ವಟೈಸ್‌ ಕಂಪನಿಯಲ್ಲಿ ದೊಡ್ಡ ಹುದ್ದೆ ಕೊಡಿಸುತ್ತೇನೆಂದು ಹೇಳಿ ವಂಚಿಸಿರುವುದಾಗಿ ಮಹಿಳೆಯರು ಆರೋಪಿಸಿದ್ದಾರೆ.

Stay up to date on all the latest ರಾಜ್ಯ news
Poll
Narendra Singh Tomar

ಕೃಷಿ ಕಾನೂನು ಸಂಬಂಧ ರೈತರು ಮತ್ತು ಕೇಂದ್ರದ ನಡುವಣ ಬಿಕ್ಕಟ್ಟಿಗೆ ಹೊರಗಿನ ಶಕ್ತಿಗಳು ಕಾರಣ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ ಹೇಳಿದ್ದಾರೆ.


Result
ಹೌದು
ಇಲ್ಲ
flipboard facebook twitter whatsapp