ನೀತಿ ಸಂಹಿತೆ ಉಲ್ಲಂಘನೆ ಆರೋಪ: ಆಯೋಗದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ವಿಧಾನಸಭೆ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ಮುಖಂಡರು ನೀತಿ ಸಂಹಿತೆ ಉಲ್ಲಂಘನೆ ಮಾಡುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ಸೋಮವಾರ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.
Published: 26th November 2019 12:41 PM | Last Updated: 26th November 2019 12:41 PM | A+A A-

ಕಾಂಗ್ರೆಸ್ ನಾಯಕರ ಪ್ರತಿಭಟನೆ
ಬೆಂಗಳೂರು: ವಿಧಾನಸಭೆ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ಮುಖಂಡರು ನೀತಿ ಸಂಹಿತೆ ಉಲ್ಲಂಘನೆ ಮಾಡುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ಸೋಮವಾರ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.
ರಾಜ್ಯದಲ್ಲಿ ನಡೆಯುತ್ತಿರುವ 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ನೀತಿ ಸಂಹಿತೆ ಉಲ್ಲಂಘಿ ಸಿದರೂ ಆಯೋಗ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದರು.
ಚುನಾವಣೆ ಕಚೇರಿ ಎದುರು ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಠೊಡ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಯಡಿಯೂರಪ್ಪ ವೀರಶೈವ ಸಮಾಜದ ತಮ್ಮನ್ನು ಕೈ ಬಿಡುವುದಿಲ್ಲ ಎಂದು ಜಾತಿ ಹೆಸರಿನಲ್ಲಿ ಮತಯಾಚಿಸಿದ್ದಾರೆ.
ಅಲ್ಲದೇ ವಿಧಾನಸಭೆ ಸದಸ್ಯರಲ್ಲದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸರ್ಕಾರದ ಅವಧಿ ಮುಗಿಯುವವರೆಗೂ ಉಪ ಮುಖ್ಯಮಂತ್ರಿಯಾಗಿರುತ್ತಾರೆಂದು ಹೇಳುವ ಮೂಲಕ ಲಿಂಗಾಯತ ಸಮು ದಾಯದ ಮತಗಳನ್ನು ಬಿಜೆಪಿ ಅಭ್ಯರ್ಥಿಗೆ ನೀಡ ಬೇಕೆಂದು ಜಾತಿ ಹೆಸರಿನಲ್ಲಿ ಮತಯಾಚನೆ ಮಾಡಿ ದ್ದಾರೆಂದು ಆರೋಪಿಸಿದ್ದಾರೆ. ಈ ಸಂಬಂಧ ಆಯೋಗಕ್ಕೆ ದೂರು ನೀಡಿ, ಯಡಿಯೂರಪ್ಪ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಪ್ರಕಾಶ್ ರಾಠೊಡ್ ಮಾತನಾಡಿ, ಕೆಲವು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಮತದಾರರಿಗೆ ಸೀರೆ ಹಂಚಿ ಮತಯಾಚಿಸಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ದೂರು ಕೊಟ್ಟರೂ ಪ್ರಯೋಜನವಾಗಿಲ್ಲ.
ಚುನಾವಣೆ ಆಯೋಗ ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ. ಆಯೋಗ ಕೂಡಲೇ ನೀತಿ ಸಂಹಿತೆ ಉಲ್ಲಂಘಿಘನೆ ಮಾಡಿದವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.