ವಿಧಾನಸಭಾ ಉಪ ಚುನಾವಣೆ: ಕಾರ್ಮಿಕರಿಗೆ ಕಡ್ಡಾಯ ವೇತನ ಸಹಿತ ರಜೆ ನೀಡಲು ಆದೇಶ

ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಡಿಸೆಂಬರ್ 5 ರಂದು ಉಪ ಚುನಾವಣೆ ನಡೆಯುತ್ತಿದ್ದು, ಅಂದು ಮತದಾನ ಮಾಡಲು ಅನುಕೂಲವಾಗುವಂತೆ ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಿಸಲಾಗಿದೆ.
ವಿಧಾನಸೌಧ
ವಿಧಾನಸೌಧ

ಬೆಂಗಳೂರು: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಡಿಸೆಂಬರ್ 5 ರಂದು ಉಪ ಚುನಾವಣೆ ನಡೆಯುತ್ತಿದ್ದು, ಅಂದು ಮತದಾನ ಮಾಡಲು ಅನುಕೂಲವಾಗುವಂತೆ ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಿಸಲಾಗಿದೆ.

ಅಥಣಿ, ಕಾಗವಾಡ, ಗೋಕಾಕ್, ಯೆಲ್ಲಾಪುರ, ಹಿರೇಕೆರೂರು, ರಾಣೆಬೆನ್ನೂರು, ವಿಜಯನಗರ, ಚಿಕ್ಕಬಳ್ಳಾಪುರ, ಕೆ.ಆರ್. ಪುರ, ಯಶವಂತಪುರ, ಮಹಾಲಕ್ಷ್ಮೀ ಬಡಾವಣೆ, ಶಿವಾಜಿನಗರ, ಹೊಸಕೋಟೆ, ಕೃಷ್ಣರಾಜಪೇಟೆ, ಹುಣಸೂರು, ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ರಜೆ ಪ್ರಕಟಿಸಲಾಗಿದೆ.

ಮತದಾನ ನಡೆಯಲಿರುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನೋಂದಾಯಿತರಾದ ಅರ್ಹ ಮತದಾರರಾಗಿರುವ ಎಲ್ಲಾ ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಎಲ್ಲಾ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1963 ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾ ದಿನಗಳು) ಕಾಯ್ದೆಯ ಕಲಂ 3-ಎ ಹಾಗೂ 1951 ರ ಪ್ರಜಾ ಪ್ರತಿನಿಧಿ ಕಾಯ್ದೆಯ ಕಲಂ 135 (ಬಿ) ರಡಿಯಲ್ಲಿ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಸಂಸ್ಥೆಗಳು, ನಿಯೋಜಕರು ಅನುವು ಮಾಡಿಕೊಡಬೇಕು ಎಂದು ಚುನಾವಣಾ ಆಯೋಗ ಸೂಚಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com