ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡುತ್ತೇವೆ: ಬಿಬಿಎಂಪಿಗೆ ಮತ್ತೆ ಹೈಕೋರ್ಟ್ ತರಾಟೆ

ನ್ಯಾಯಾಲಯದ ಆದೇಶ ಪಾಲನೆಯ ಕುರಿತು ಕೌನ್ಸಿಲ್ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುವುದಾಗಿ ಹೇಳಿಕೆ ನೀಡಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿರುದ್ಧ ಹೈಕೋರ್ಟ್ ಗರಂ ಆಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ನ್ಯಾಯಾಲಯದ ಆದೇಶ ಪಾಲನೆಯ ಕುರಿತು ಕೌನ್ಸಿಲ್ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುವುದಾಗಿ ಹೇಳಿಕೆ ನೀಡಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿರುದ್ಧ ಹೈಕೋರ್ಟ್ ಗರಂ ಆಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿನ ರಸ್ತೆ ಗುಂಡಿಗಳು ಮತ್ತು ಪಾದಚಾರಿ ಮಾರ್ಗಗಳಿಂದ ಉಂಟಾಗುವ ಅಪಘಾತಗಳಲ್ಲಿ ಗಾಯಗೊಂಡ ವ್ಯಕ್ತಿಗಳಿಗೆ ಸೂಕ್ತ ಪರಿಹಾರ ನೀಡುವಂತೆ ಹೈಕೋರ್ಟ್ ಈ ಹಿಂದೆ ನೀಡಿದ್ದ ಆದೇಶ‌ ಪಾಲನೆ ಮಾಡದೆ ಬಿಬಿಎಂಪಿ ಕಣ್ಣಾಮುಚ್ಚಾಲೆ ಆಟವಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ, ಆ ಕುರಿತು ಪಾಲಿಕೆ ಸಭೆಯಲ್ಲಿ ಚರ್ಚಿಸುವ ಅಧಿಕಾರಿಗಳ ಧೋರಣೆಯನ್ನು ತರಾಟೆಗೆ ತೆಗೆದುಕೊಂಡಿತು.

ರಸ್ತೆ ಗುಂಡಿಗಳಿಂದ ಅಪಘಾತ ಸಂಭವಿಸಿ ಗಾಯಗೊಂಡವರಿಗೆ ಪರಿಹಾರ ನೀಡುವ ಬಗ್ಗೆ ಕೋರ್ಟ್ ನೀಡಿದ ಆದೇಶ ಪಾಲನೆ ಮಾಡದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮೇಯರ್, ಉಪ ಮೇಯರ್‌ ಮತ್ತು ಆಡಳಿತ ಪಕ್ಷದ ನಾಯಕರು ಉದ್ಧಟತನ ಮೆರೆದಿದ್ದಾರೆ’ ಎಂದು ಹೈಕೋರ್ಟ್ ಕೆಂಡಾಮಂಡಲವಾಗಿದೆ.

'ಕೋರ್ಟ್ ಆದೇಶ ಪಾಲನೆ ಮಾಡುವುದನ್ನು ಬಿಟ್ಟು ಸಭೆ ಸೇರಿ ಕೋರ್ಟ್ ಆದೇಶದ ಬಗ್ಗೆ ಚರ್ಚಿಸುತ್ತಾರೆ ಎಂದರೆ ಏನರ್ಥ, ಕೋರ್ಟ್‍ನ ಘನತೆ ಹಾಗೂ ಪ್ರತಿಷ್ಠೆಯದಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ. ಇದು ನ್ಯಾಯಾಂಗದಲ್ಲಿ ನಡೆಸಿರುವ ಹಸ್ತಕ್ಷೇಪ. ಬಿಬಿಎಂಪಿಗೆ ತಕ್ಕಪಾಠ ಕಲಿಸಲೇಬೇಕು. ಸಭೆನಡೆಸಿದ ಆ ಮೂವರ ಹೆಸರು ಕೊಡಿ ಅವರಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿಗೊಳಿಸುತ್ತೇವೆ' ಎಂದು ಎಚ್ಚರಿಸಿತು.

ಈ ಹಿಂದೆ 'ರಸ್ತೆ ಗುಂಡಿಗಳಿಂದ ಸಾರ್ವಜನಿಕರು ಸಾವು–ನೋವುಗಳಿಗೆ ಈಡಾಗುತ್ತಿದ್ದಾರೆ' ಎಂದು ಆಕ್ಷೇಪಿಸಿ ಕೋರಮಂಗಲದ ವಿಜಯನ್ ಮೆನನ್ ಸೇರಿದಂತೆ ನಾಲ್ವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್‌.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com