ಐಟಿ ಕಚೇರಿ ಮುಂದೆ ಪ್ರತಿಭಟನೆ; ಕುಮಾರಸ್ವಾಮಿ, ಸಿದ್ದರಾಮಯ್ಯ ಮತ್ತಿತರರ ವಿರುದ್ದ ಪ್ರಕರಣ ದಾಖಲು

ಲೋಕಸಭಾ ನೀತಿ ಸಂಹಿತೆ ಉಲ್ಲಂಘಿಸಿ ಆದಾಯ ತೆರಿಗೆ ಎದುರು ಪ್ರತಿಭಟನೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಸೇರಿದಂತೆ ಇತರ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ವಿರುದ್ಧ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಐಟಿ ಕಚೇರಿ ಮುಂದೆ ಪ್ರತಿಭಟನೆ; ಕುಮಾರಸ್ವಾಮಿ, ಸಿದ್ದರಾಮಯ್ಯ ಮತ್ತಿತರರ ವಿರುದ್ದ ಪ್ರಕರಣ ದಾಖಲು
ಐಟಿ ಕಚೇರಿ ಮುಂದೆ ಪ್ರತಿಭಟನೆ; ಕುಮಾರಸ್ವಾಮಿ, ಸಿದ್ದರಾಮಯ್ಯ ಮತ್ತಿತರರ ವಿರುದ್ದ ಪ್ರಕರಣ ದಾಖಲು

ಬೆಂಗಳೂರು: ಲೋಕಸಭಾ ನೀತಿ ಸಂಹಿತೆ ಉಲ್ಲಂಘಿಸಿ ಆದಾಯ ತೆರಿಗೆ ಎದುರು ಪ್ರತಿಭಟನೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಸೇರಿದಂತೆ ಇತರ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ವಿರುದ್ಧ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೊತೆಗೆ, ಪ್ರತಿಭಟನಾ ನಿರತರನ್ನು ತಡೆಯಲು ವಿಫಲವಾಗಿರುವ ಅಧಿಕಾರಿಗಳ ವಿರುದ್ಧ ಕೂಡ ನ್ಯಾಯಾಲಯದ ಸೂಚನೆಯಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಹೆಚ್ ಡಿ ಕುಮಾರಸ್ವಾಮಿ ಅವರೊಂದಿಗೆ ಅಂದಿನ ಬೆಂಗಳೂರು ಪೊಲೀಸ್ ಆಯುಕ್ತ ಟಿ. ಸುನೀಲ್ ಕುಮಾರ್ ಅವರ ವಿರುಯ್ದ್ಧ ಸಹ ದೂರು ದಾಖಲಾಗಿದೆ.ಸಾಮಾಜಿಕ ಕಾರ್ಯಕರ್ತ ಮಲ್ಲಿಕರ್ಜುನ ಎ ಅವರ ದೂರಿನ ಆಧಾರದ ಮೇಲೆ, ನಗರ ನ್ಯಾಯಾಲಯವು ಇತ್ತೀಚೆಗೆ ಕಮರ್ಷಿಯಲ್ ಸ್ಟ್ರೀಟ್ ಪೋಲೀಸರಿಗೆ ಐಪಿಸಿಯ ವಿವಿಧ ವಿಭಾಗಗಳ ಅಡಿಯಲ್ಲಿ ಕ್ರಿಮಿನಲ್ ಪಿತೂರಿ ಮತ್ತು ಕೇಮ್ದ್ರ ಸರ್ಕಾರದ ವಿರುದ್ಧ ನಿಲುವಿಗೆ ಯತ್ನ,  ಸೇರಿದಂತೆ ವಿವಿಧ ವಿಭಾಗಗಳಲ್ಲಿ  ಪ್ರಕರಣ ದಾಖಲಿಸುವಂತೆ ನಿರ್ದೇಶನ ನೀಡಿತ್ತು.

ಕಾಂಗ್ರೆಸ್ ಮತ್ತು ಜೆಡಿ (ಎಸ್) ನಾಯಕರ ನಿವಾಸದಲ್ಲಿ ನಡೆದ ಆದಾಯ ತೆರಿಗೆ ದಾಳಿಗಳ ವಿರುದ್ಧ ಅಂದಿನ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಹಲವರು  ಇಲ್ಲಿನ ಐ-ಟಿ ಕಚೇರಿ ಬಳಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com