ಬಂಟ್ವಾಳ: ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ಮಾರಕಾಸ್ತ್ರಗಳಿಂದ ದಾಳಿ

ಬಂಟ್ವಾಳ ತಾಲೂಕಿನ ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಡೆದಿದೆ.
 

Published: 30th November 2019 10:10 PM  |   Last Updated: 30th November 2019 10:10 PM   |  A+A-


ಬಂಟ್ವಾಳ: ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Posted By : Raghavendra Adiga
Source : UNI

ಮಂಗಳೂರು: ಬಂಟ್ವಾಳ ತಾಲೂಕಿನ ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಡೆದಿದೆ.

ಅಧ್ಯಕ್ಷ ರಝಾಕ್ ಕುಕ್ಕಾಜೆ ಹಲ್ಲೆಗೊಳಗಾದವರು ಎಂದು ತಿಳಿದುಬಂದಿದೆ. ಬಂಟ್ವಾಳ ತಾಲೂಕಿನ ಮಂಚಿ ಎಂಬಲ್ಲಿ ಶನಿವಾರ ರಾತ್ರಿ ಈ ಘಟನೆ ನಡೆದಿದೆ.

ರಝಾಕ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಚಿ ಗ್ರಾಮದ ಮಂಚಿ ಕಟ್ಟೆಯಲ್ಲಿರುವ ಕ್ಲಿನಿಕ್ ವೊಂದಕ್ಕೆ ಇಂದು ರಾತ್ರಿ ಬಂದಿದ್ದರು ಎನ್ನಲಾಗಿದೆ‌. ಈ ವೇಳೆ ಬೈಕ್ ನಲ್ಲಿ ಬಂದ ಮೂವರಿದ್ದ ತಂಡ ರಝಾಕ್ ರಿಗೆ ಮಾರಕಾಸ್ತ್ರ ಗಳಿಂದ ಹಲ್ಲೆ ನಡೆಸಿ ಪರಾರಿಯಾಗಿರುವುದಾಗಿ ತಿಳಿದುಬಂದಿದೆ.

ರಝಾಕ್ ಅವರ ಕೈಗಳಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಸೀದಿ ಃಆಗೂ ವೈಯುಕ್ತಿಕ ಕಾರಣಗಳಿಗೆ ಈ ಹಲ್ಲೆ ನಡೆದಿದೆ ಎನ್ನಲಾಗಿದ್ದು ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Stay up to date on all the latest ರಾಜ್ಯ news
Poll
Parliament

ಸಂಸತ್ತಿನ ಈ ಮುಂಗಾರು ಅಧಿವೇಶನವು ಪ್ರಜಾಪ್ರಭುತ್ವದ ಕಗ್ಗೊಲೆಗೆ ಸಾಕ್ಷಿಯಾಯಿತೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp