ನೆಚ್ಚಿನ ಮೇಷ್ಟ್ರ ವರ್ಗಾವಣೆ: ಮಕ್ಕಳ ಆಕ್ರೋಶ, ರೋಧನ

ನೆಚ್ಚಿನ ಮೇಷ್ಟು ದಿಢೀರ್ ವರ್ಗಾವಣೆ ಆಗಿರುವುದನ್ನು ತಿಳಿದ ಶಾಲಾ ಮಕ್ಕಳು ರೋಧಿಸಿ ಪ್ರತಿಭಟನೆ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮೀಣ್ಯಂನಲ್ಲಿ ನಡೆದಿದೆ.

Published: 30th November 2019 11:26 AM  |   Last Updated: 30th November 2019 11:26 AM   |  A+A-


School Students crying for teacher transfer

ವರ್ಗಾವಣೆ ವಿರೋಧಿ ಮಕ್ಕಳ ಆಕ್ರಂಧನ

Posted By : Srinivasamurthy VN
Source : RC Network

ಚಾಮರಾಜನಗರ: ನೆಚ್ಚಿನ ಮೇಷ್ಟು ದಿಢೀರ್ ವರ್ಗಾವಣೆ ಆಗಿರುವುದನ್ನು ತಿಳಿದ ಶಾಲಾ ಮಕ್ಕಳು ರೋಧಿಸಿ ಪ್ರತಿಭಟನೆ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮೀಣ್ಯಂನಲ್ಲಿ ನಡೆದಿದೆ.

ನೆಚ್ಚಿನ ಮೇಷ್ಟು ದಿಢೀರ್ ವರ್ಗಾವಣೆ ಆಗಿರುವುದನ್ನು ತಿಳಿದ ಶಾಲಾ ಮಕ್ಕಳು ರೋಧಿಸಿ, ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲೆಯ ಹನೂರು ತಾಲೂಕಿನ ಮೀಣ್ಯಂನಲ್ಲಿ ಈ ಘಟನೆ ನಡೆದಿದ್ದು, ಹನೂರು ತಾಲೂಕಿನ ಮೀಣ್ಯಂ ಶಾಲೆಯಲ್ಲಿ  ಮಕ್ಕಳು ತಮ್ಮ ನೆಚ್ಚಿನ ಶಿಕ್ಷಕರಿಗಾಗಿ ಪ್ರತಿಭಟನೆ ನಡೆಸಿದ್ದಾರೆ.

ಮಹಾದೇವಸ್ವಾಮಿ ಎಂಬುವವರನ್ನು ಮೀಣ್ಯಂ ಶಾಲೆಯಿಂದ ಲೊಕ್ಕನಹಳ್ಳಿ ಶಾಲೆಗೆ ದಿಢೀರ್ ಆಗಿ ವರ್ಗಾವಣೆ ಮಾಡಲಾಗಿತ್ತು. ಈ ಸುದ್ದಿ ಕೇಳಿದ ವಿದ್ಯಾರ್ಥಿಗಳು, ನೆಚ್ಚಿನ ಶಿಕ್ಷಕರು ಬೇಕೇ ಬೇಕೆಂದು ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು. ಗ್ರಾಮಸ್ಥರೂ ಸಹ ಇದಕ್ಕೆ ಧ್ವನಿಗೂಡಿಸಿದರು. ತಮ್ಮ ಶಾಲೆಗೆ ಮತ್ತೇ ಮಹಾದೇವಸ್ವಾಮಿ ನಿಯೋಜನೆ ಆಗದಿದ್ದರೇ ಶನಿವಾರದಿಂದ ಯಾರೂ ಶಾಲೆಗೆ ಬರುವುದಿಲ್ಲ ಎಂದು ಮಕ್ಕಳು ಎಚ್ಚರಿಕೆ ನೀಡಿದ್ದಾರೆ. 

ಇನ್ನು ವರ್ಗಾವಣೆಯಾದ ಪಿ.ಮಹಾದೇವಸ್ವಾಮಿ ಕಳೆದ 4 ವರ್ಷದಿಂದ ಮೀಣ್ಯಂ ಶಾಲೆಯಲ್ಲಿದ್ದು ಕನ್ನಡ, ಇಂಗ್ಲಿಷ್ ಜೊತೆಗೆ ದೈಹಿಕ ಶಿಕ್ಷಣ ಶಿಕ್ಷಕರು ಇಲ್ಲದಿದ್ದರಿಂದ ಅದರ ಜವಾಬ್ದಾರಿಯನ್ನು ಹೊತ್ತಿದ್ದರು. ಇದರೊಟ್ಟಿಗೆ ಬಿಸಿಯೂಟದ ಮೇಲ್ವಿಚಾರಣೆಯನ್ನು ವಹಿಸಿಕೊಂಡು ಮಕ್ಕಳಿಗೆ ಶುಚಿ-ರುಚಿಯಾದ ಬಿಸಿಯೂಟ ಸಿಗುವಂತೆ ಮಾಡಿದ್ದರು ಎಂದು ಗ್ರಾಮಸ್ಥ ಮಾದೇಶ್ ತಿಳಿಸಿದ್ದಾರೆ. ಪಿ.ಮಹಾದೇವಸ್ವಾಮಿ ಅವರ ವರ್ಗಾವಣೆಯಲ್ಲಿ ಮುಖ್ಯ ಶಿಕ್ಷಕ ಬಾಲುನಾಯ್ಕ ಎಂಬವವರು ಪ್ರಭಾವ ಬೀರಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದು, ಶನಿವಾರ ಇಲ್ಲವೇ, ಭಾನುವಾರ ಪ್ರತಿಭಟನೆ ನಡೆಸಿ ಶಿಕ್ಷಕರನ್ನು ಪುನರ್ ನಿಯೋಜಿಸುವಂತೆ ಒತ್ತಾಯಿಸಲಾಗುವುದು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

-ಗೂಳಿಪುರ ನಂದೀಶ್

Stay up to date on all the latest ರಾಜ್ಯ news
Poll
Covid-_Vaccine1

ರಾಜಕಾರಣಿಗಳಿಗೆ ಮೊದಲು ಕೋವಿಡ್-19 ಲಸಿಕೆ ನೀಡಬೇಕೇ?


Result
ಇಲ್ಲ, ಸಾಮಾನ್ಯ ಜನರಿಗೆ ಮೊದಲು
ಹೌದು, ಅವರು ನಮ್ಮ ನಾಯಕರು
flipboard facebook twitter whatsapp