ಬೆಂಗಳೂರು: ಅಕ್ರಮ ನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ತಡೆಯಾಜ್ಞೆ ನೀಡುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ತಮ್ಮ ವಿರುದ್ಧ ವಿಚಾರಣಾ ನ್ಯಾಯಾಲಯ ನೀಡಿದ್ದ ಸಮನ್ಸ್ ರದ್ದುಗೊಳಿಸುವಂತೆ ಕೋರಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ಮತ್ತು ಅಶೋಕ್. ಎಸ್.ಕಿಣಗಿ ಅವರಿದ್ದ ರಜಾಕಾಲದ ವಿಭಾಗೀಯ ಪೀಠ ಮಂಗಳವಾರ ಅರ್ಜಿಯನ್ನು ವಜಾಗೊಳಿಸಿದೆ.
ಆದರೆ, ಕುಮಾರಸ್ವಾಮಿ ಅವರ ವಕೀಲರ ಮನವಿ ಮೇರೆಗೆ ಖುದ್ದು ಹಾಜರಾತಿಗೆ ನಾಲ್ಕು ವಾರಗಳ ವಿನಾಯ್ತಿ ನೀಡಿ ಆದೇಶ ನೀಡಿದೆ. ವಿಚಾರಣೆಯನ್ನು ಅಕ್ಟೋಬರ್ 14ಕ್ಕೆ ಮುಂದೂಡಲಾಗಿದೆ.
Advertisement