ಬಿಬಿಎಂಪಿಯಲ್ಲಿನ ಹಗರಣಗಳನ್ನು ಬಿಜೆಪಿ ಬಯಲಿಗೆಳೆಯಲಿದೆ: ಬಿ.ಎಸ್.ಯಡಿಯೂರಪ್ಪ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಡೆದಿರುವ ಹಗರಣಗಳನ್ನು ಬಿಜೆಪಿ ಬಹಿರಂಗಗೊಳಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ಹೇಳಿದ್ದಾರೆ. 
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಮೈಸೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಡೆದಿರುವ ಹಗರಣಗಳನ್ನು ಬಿಜೆಪಿ ಬಹಿರಂಗಗೊಳಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ಹೇಳಿದ್ದಾರೆ. 

ತೀವ್ರ ಕುತೂಹಲ ಕೆರಳಿಸಿದ್ದ ಬಿಬಿಎಂಪಿಯ ನೂತನ ಮೇಯರ್ ಮತ್ತು ಉಪ ಮೇಯರ್ ಚುನಾವಣೆಯಲ್ಲಿ ಬೆಂಗಳೂರಿನ 53ನೇ ಮೇಯರ್ ಆಗಿ ಜೋಗುಪಾಳ್ಯ ವಾರ್ಡ್ ಬಿಜೆಪಿ ಸದಸ್ಯ ಗೌತಮ್ ಕುಮಾರ್ ಜೈನ್ ಮತ್ತು ಉಪ ಮೇಯರ್ ಆಗಿ ಬೊಮ್ಮನಹಳ್ಳಿ ವಾರ್ಡ್ ಬಿಜೆಪಿ ಸದಸ್ಯ ರಾಮ್ ಮೋಹನ್ ರಾಜ್ ಆಯ್ಕೆಯಾಗಿದ್ದಾರೆ. 

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಯಡಿಯೂರಪ್ಪ ಅವರು, ಬಿಬಿಎಂಪಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿರುವುದರಿಂದ ಹಗರಣಗಳನ್ನು ಬಯಲಿಗೆಳೆಯಲು ಸಹಾಯವಾಗಿದೆ. ಸಾಕಷ್ಟು ವರ್ಷಗಳಾದ ಬಳಿಕ ಬಿಬಿಎಂಪಿಯಲ್ಲಿ ಬಿಜೆಪಿಗೆ ಅಧಿಕಾರ ಸಿಕ್ಕಿದೆ. ಮೇಯರ್ ಚುನಾವಣೆಯನ್ನು ಮುಂದೂಡಲು ವಿರೋಧ ಪಕ್ಷದ ನಾಯಕರು ಸಾಕಷ್ಟು ಯತ್ನ ನಡೆಸಿದರು. ಅಂತಿಮವಾಗಿ ಬಿಜೆಪಿಗೆ ಅಧಿಕಾರ ಸಿಕ್ಕಿದ್ದು ಸಂತಸ ತಂದಿದೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com