ಡಿಕೆಶಿ ವಿಚಾರಣೆಗೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್: ಮತ್ತೆ ನ್ಯಾಯಾಂಗ ಬಂಧನ ವಿಸ್ತರಣೆ

ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯ (ಇಡಿ)ಯಿಂದ ಬಂಧನಕ್ಕೊಳಗಾಗಿ ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಮತ್ತಷ್ಟು ವಿಚಾರಣೆ ನಡೆಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ ನೀಡಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

Published: 02nd October 2019 08:32 AM  |   Last Updated: 02nd October 2019 02:15 PM   |  A+A-


DK Shivakumar

ಡಿ.ಕೆ.ಶಿವಕುಮಾರ್

Posted By : Manjula VN
Source : The New Indian Express

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯ (ಇಡಿ)ಯಿಂದ ಬಂಧನಕ್ಕೊಳಗಾಗಿ ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಮತ್ತಷ್ಟು ವಿಚಾರಣೆ ನಡೆಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ ನೀಡಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

2017ರ ಆಗಸ್ಟ್ ತಿಂಗಳಿನಲ್ಲಿ ನವದೆಹಲಿಯಲ್ಲಿರುವ ಫ್ಲಾಟ್ ವೊಂದರಲ್ಲಿ ಡಿಕೆ.ಶಿವಕುಮಾರ್ ಅವರಿಗೆ ಸೇರಿದ್ದ ರೂ.8.59 ದಾಖಲೆಯಿಲ್ಲದ ಹಣವನ್ನು ವಶಕ್ಕೆ ಪಡೆದುಕೊಂಡಿದ್ದರು. ಇದಕ್ಕೆ ಸಂಬಂಧಿಸಿದೆ ವಿಚಾರಣೆ ನಡೆಸಲು ಅನುಮತಿ ನೀಡಬೇಕೆಂದು ಕಳೆದ ತಿಂಗಳು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಮನವಿಗೆ ಪ್ರತಿಕ್ರಿಯೆ ನೀಡಿರುವ ರಾಜ್ಯ ಸರ್ಕಾರ ವಿಚಾರಣೆಗೆ ಅನುಮತಿ ನೀಡಿದೆ.

ರಾಜ್ಯ ಸರ್ಕಾರ ಅನುಮತಿ ನೀಡಿದ ಬೆನ್ನಲ್ಲೇ, ನ್ಯಾಯಾಂಗ ಬಂಧನದ ಅವಧಿಯನ್ನು ಸಿಬಿಐ ವಿಶೇಷ ನ್ಯಾಯಾಲಯ ಅ.15ರವರೆಗೆ ವಿಸ್ತರಣೆ ಮಾಡಿದೆ. 

ಸೆ.17ರಂದು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾದ ಶಿವಕುಮಾರ್ ಅವರು ಅದನ್ನು ಪೂರೈಸಿದ ಹಿನ್ನಲೆಯಲ್ಲಿ ಮಂಗಳವಾರ ಅವರನ್ನು ಸಿಬಿಐ ವಿಶೇಷ ನ್ಯಾಯಾಲಯದ ಅಕ್ರಮ ಹಣ ವರ್ಗಾವಣೆ ಕಾಯ್ದೆಯ ಪ್ರಕರಣದ ವಿಶೇಷ ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್ ಅವರ ಮುಂದೆ ಹಾಜರು ಪಡಿಸಲಾಯಿತು. 

ಈ ವೇಳೆ ಜಾರಿ ನಿರ್ದೇಶನಾಲಯದ ಪರ ಹಾಜರಾದ ವಕೀಲ ಅಮಿತ್ ಮಹಾಜನ್, ಆರೋಪಿಯು ಸೆ.14ಕ್ಕೆ ಆಸ್ಪತ್ರೆಗೆ ದಾಖಲಾಗಿದ್ದ ಹಿನ್ನಲೆಯಲ್ಲಿ ಸೆ.17ರವರೆಗೆ ನಮ್ಮ ಕಸ್ಟಡಿಯಲ್ಲಿದ್ದರೂ ನಮಗೆ ಅವರ ವಿಚಾರಣೆ ಮಾಡಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ಈಗ ವಿಚಾರಣೆಗೆ ಅವಕಾಶ ಕಲ್ಪಿಸಬೇಕೆಂದು ಮನವಿ ಮಾಡಿಕೊಂಡರು. ಶಿವಕುಮಾರ್ ಜಾಮೀನು ಅರ್ಜಿ ಅ.14ಕ್ಕೆ ಹೈಕೋರ್ಟ್ ನಲ್ಲಿ ವಿಚಾರಣೆಗೆ ಬರಲಿದೆ. ತನಿಖೆ ಪ್ರಗತಿಯಲ್ಲಿದೆ. ಆದ್ದರಿಂದ ಆರೋಪಿಯ ನ್ಯಾಯಾಂಗ ಬಂಧನವನ್ನು ವಿಸ್ತರಿಸುವಂತೆ ಕೋರಿದರು. 

ನ್ಯಾಯಾಲಯವು ಅ.4 ಮತ್ತು 5ರಂದು ಬೆಳಿಗ್ಗೆ 10ರಿಂದ ಸಂಜೆ 3ರವರೆಗೆ ಇಡಿಯ ಸಹಾಯಕ ನಿರ್ದೇಶಕ ಮತ್ತು ಪ್ರಕರಣದ ತನಿಖಾಧಿಕಾರಿ ಸೌರಬ್ ಮೆಹ್ತಾ, ಸಹಾಯಕ ನಿರ್ದೇಶಕ ರವೀಶ್ ಭಾರದ್ವಾಜ್ ಮತ್ತು ಎಇಒ ದಿವಾಕರ್ ಶರ್ಮಾಗೆ ಜೈಲಿನಲ್ಲಿ ಡಿಕೆಶಿ ವಿಚಾರಣೆಗೆ ಅನುಮತಿ ನೀಡಿದೆ. 

Stay up to date on all the latest ರಾಜ್ಯ news with The Kannadaprabha App. Download now
Poll
Priyanka gandhi

ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶದಲ್ಲಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಬೇಕೇ?


Result
ಹೌದು
ಬೇಡ
ಗೊತ್ತಿಲ್ಲ
facebook twitter whatsapp