ಸ್ವಪಕ್ಷದಿಂದಲೇ ಹೆಚ್ಚಿದ ಒತ್ತಡ: ಬಳ್ಳಾರಿ ವಿಭಜನೆಗೆ ಸಿಎಂ ಯಡಿಯೂರಪ್ಪ ಬ್ರೇಕ್

ಸ್ವಪಕ್ಷದಿಂದಲೇ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆ ವಿಭಜನೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬುಧವಾರ ತಡೆ ನೀಡಿದ್ದಾರೆ...
ಸಿಎಂ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ

ಬೆಂಗಳೂರು: ಸ್ವಪಕ್ಷದಿಂದಲೇ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆ ವಿಭಜನೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬುಧವಾರ ತಡೆ ನೀಡಿದ್ದಾರೆ. 

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಿನ್ನೆ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಈ ಸಂಬಂಧ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಯಾವುದೇ ನಿರ್ಧಾರ ಕೈಗೊಳ್ಳದೆ ಪ್ರಸ್ತಾಪಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ ಎಂದು ತಿಳಿದುಬಂದಿದೆ. 

ಉಪಚುನಾವಣೆ ಪೂರ್ಣಗೊಂಡ ಬಳಿಕ ಈ ಬಗ್ಗೆ ಮತ್ತೊಮ್ಮೆ ಸಭೆ ನಡೆಸಲಿರುವ ಸಿಎಂ ಯಡಿಯೂರಪ್ಪ ಅವರು, ಸಭೆ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಆಶ್ವಾಸನೆ ನೀಡಿದ್ದಾರೆ. 

ಸಭೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಸೇರಿ ಬಳ್ಳಾರಿ ಜಿಲ್ಲೆಯ ಶಾಸಕರು, ವಿಧಾನಪರಿಷತ್ ಸದಸ್ಯರು, ಸಂಸದರು ಭಾಗವಹಿಸಿದ್ದರು. ಈ ವೇಳೆ ಅಖಂಡ ಜಿಲ್ಲೆಗಾಗಿ ಶಾಸಕರಾದ ಸೋಮಶೇಖರ್ ರೆಡ್ಡಿ, ಪಿ.ಟಿ.ಪರಮೇಶ್ವರ್ ನಾಯ್ಕ್ ಆರೋಗ್ಯ ಸಚಿವ ಶ್ರೀರಾಮುಲು ಹಾಗೂ ಹಲವು ನಾಯಕರು ಒತ್ತಾಯಿಸಿದರು. 

ಅನರ್ಹಗೊಂಡಿರುವ ಶಾಸಕ ಆನಂದ್ ಸಿಂಗ್, ಕಾಂಗ್ರೆಸ್ ಮುಖಂಡ ಕೊಂಡಯ್ಯ ಮತ್ತಿತರರು ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆಯನ್ನು ರಚನೆ ಮಾಡಬೇಕೆಂದು ಈ ವೇಳೆ ಆಗ್ರಹಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com