ಮಂಡ್ಯ ಬಳಿ ಖಾಸಗಿ ಬಸ್ಸಿಗೆ ಕಾರು ಡಿಕ್ಕಿ, ಇಬ್ಬರ ಸಾವು

ಖಾಸಗಿ ಬಸ್ಸಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಬಳಿ ಬುಧವಾರ ತಡರಾತ್ರಿ ನಡೆದಿದೆ.

Published: 03rd October 2019 01:45 PM  |   Last Updated: 03rd October 2019 01:45 PM   |  A+A-


Accident spot

ಸಾಂದರ್ಭಿಕ ಚಿತ್ರ

Posted By : Prasad SN
Source : UNI

ಮಂಡ್ಯ: ಖಾಸಗಿ ಬಸ್ಸಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಬಳಿ ಬುಧವಾರ ತಡರಾತ್ರಿ ನಡೆದಿದೆ.

ಮೈಸೂರು ನಿವಾಸಿಗಳಾದ ಮುದಾಸಿರ್​ ಅಹಮದ್​ ಶರೀಫ್​ (30) ಮತ್ತು ಕಾರು ಚಾಲಕ ತಜಮುಲ್​ ರಜ್ಜ್​ (40) ಮೃತ ದುರ್ದೈವಿಗಳು. ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಬುಧವಾರ ತಡರಾತ್ರಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿದ್ದೆಯ ಮಂಪರಿನಲ್ಲಿದ್ದ ಇನ್ನೋವ ಕಾರಿನ ಚಾಲಕ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಬಳಿ ರಸ್ತೆ ವಿಭಜಕವನ್ನು ಹತ್ತಿಸಿದ್ದು, ಬೆಂಗಳೂರಿನಿಂದ ಮೈಸೂರಿಗೆ ಬರುತ್ತಿದ್ದ ಖಾಸಗಿ ಬಸ್​ಗೆ ಡಿಕ್ಕಿ ಹೊಡೆದಿದ್ದಾನೆ ಎಂದು ತಿಳಿದು ಬಂದಿದೆ.

ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಮೈಸೂರಿನ ಕೆ.ಆರ್​. ಆಸ್ಪತ್ರೆಗೆ ರವಾನಿಸಲಾಗಿದ್ದು, ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Stay up to date on all the latest ರಾಜ್ಯ news with The Kannadaprabha App. Download now
facebook twitter whatsapp