ಕೇಂದ್ರ, ರಾಜ್ಯ ಸರ್ಕಾರಗಳ ಧೋರಣೆ ಖಂಡಿಸಿ ಅ.10ಕ್ಕೆ ವಿಧಾನಸೌಧ ಮುತ್ತಿಗೆ

ಪ್ರವಾಹ ಸಂತ್ರಸ್ತ ನಿರಾಶ್ರಿತರ ಕುರಿತು ಉದಾಸೀನ ತೋರುತ್ತಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಧೋರಣೆಯನ್ನು ಖಂಡಿಸಿ ಅ.10 ರಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನಿರ್ಧರಿಸಿದೆ.
ವಿಧಾನಸೌಧ
ವಿಧಾನಸೌಧ

ಬೆಂಗಳೂರು: ಪ್ರವಾಹ ಸಂತ್ರಸ್ತ ನಿರಾಶ್ರಿತರ ಕುರಿತು ಉದಾಸೀನ ತೋರುತ್ತಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಧೋರಣೆಯನ್ನು ಖಂಡಿಸಿ ಅ.10 ರಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನಿರ್ಧರಿಸಿದೆ.

ಇಂದು ಸುದ್ದಿಗೋಷ್ಠಿಯಲ್ಲಿ  ಹಸಿರು ಸೇನೆಯ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, ಆ ದಿನ ಬೆಳಗ್ಗೆ 11 ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಸಾವಿರಾರು ಸಂಖ್ಯೆಯಲ್ಲಿ ರೈತರು ಪ್ರತಿಭಟನಾ ಮೆರವಣಿಗೆಯೊಂದಿಗೆ ಹೊರಟು ವಿಧಾನಸೌಧಕ್ಕೆ ಮತ್ತಿಗೆ ಹಾಕಾಲಾಗುವುದಾಗಿ ತಿಳಿಸಿದರು.

ನಿರಾಶ್ರಿತರಿಗೆ ಪರಿಹಾರ ನೀಡದೇ ಕೇವಲ ತಾತ್ಕಾಲಿಕ ಗಂಜಿ ಕೇಂದ್ರಗಳನ್ನು ತೆರೆದಿದ್ದು, ಈಗ ಅವುಗಳನ್ನು ಸಹ ಮುಚ್ಚಲಾಗಿದೆ. ಈ ಧೋರಣೆಯನ್ನು ಖಂಡಿಸಿ ಪ್ರತಿಭಟನೆ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಕಳೆದ ವರ್ಷ ಬರ ಪರಿಹಾರವಾಗಿ ಕೇಂದ್ರ ಸರ್ಕಾರ 1059 ಕೋಟಿ ಬಿಡುಗಡೆ ಮಾಡಿತ್ತು. ಆದರೆ ರಾಜ್ಯ ಸರ್ಕಾರ ಆ ಹಣವನ್ನು ರೈತರಿಗೆ ನೀಡದೆ ಮೀನಾ ಮೇಷ ಏಣಿಸುತ್ತಿದೆ ಎಂದು ಆರೋಪಿಸಿದರು.

ಪ್ರತಿ ವರ್ಷವೂ ವಿಧಾನಸಭೆಯ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲಿ  ನಡೆಸಲಾಗುತ್ತಿತ್ತು. ಅದರೆ ಈಗ ಅಲ್ಲಿ ಅಧಿವೇಶನ ನಡೆಸಿದರೆ ಪ್ರವಾಹ ಸಂತ್ರಸ್ತರ ವಿರೋಧ ಎದುರಿಸಬೇಕಾಗುತ್ತದೆ ಎಂಬ ಮುನ್ಸೂಚನೆಯಿಂದ ಬೆಂಗಳೂರಿನಲ್ಲೇ ಅಧಿವೇಶನ ನಡೆಸಲು ತೀರ್ಮಾನಿಸಿರುವುದು ದುರಂತ ಎಂದರು.

ರಾಜ್ಯ ಸರ್ಕಾರ ಪ್ರವಾಹ ಸಂತ್ರಸ್ತರಿಗೆ ಶಿಘ್ರ ಪರಿಹಾರ ನೀಡುಬೇಕು, ಸಾಲ ಮನ್ನಾ ಘೋಷಣೆ ಮಾಡಬೇಕು ಹಾಗೂ ಕೃಷ್ಣಾ ನದಿ ನೀರು ನಿರ್ವಾಣಾ ಮಂಡಳಿ ನೇಮಕ ಮಾಡಬೇಕು ಎಂದು ಒತ್ತಾಯಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com