ನೆರೆ ಪರಿಹಾರ ಬಿಎಸ್ ವೈಗೆ ದೊಡ್ಡ ರಿಲೀಫ್; ತುಂಬಾ ಕಡಿಮೆಯಾಯಿತು ಎಂದ ಪ್ರತಿಪಕ್ಷಗಳು

ನೆರೆ ಪರಿಹಾರ ಸಂಬಂಧ ರಾಜ್ಯದ ಜನರ ಆಕ್ರೋಶಕ್ಕೆ ಮಣಿದ ಕೇಂದ್ರ ಸರ್ಕಾರ  1, 200 ಕೋಟಿ ರೂಪಾಯಿ ಬಿಡುಗಡೆ ಮಾಡಿರುವುದು  ಬಿಜೆಪಿ ಸರ್ಕಾರ ಹಾಗೂ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

ಬೆಂಗಳೂರು: ನೆರೆ ಪರಿಹಾರ ಸಂಬಂಧ ರಾಜ್ಯದ ಜನರ ಆಕ್ರೋಶಕ್ಕೆ ಮಣಿದ ಕೇಂದ್ರ ಸರ್ಕಾರ  1, 200 ಕೋಟಿ ರೂಪಾಯಿ ಬಿಡುಗಡೆ ಮಾಡಿರುವುದು  ಬಿಜೆಪಿ ಸರ್ಕಾರ ಹಾಗೂ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ.

ಕೇಂದ್ರ ಸರ್ಕಾರ 1200 ಕೋಟಿ ಮಧ್ಯಂತರ ಪರಿಹಾರ ಪ್ರಕಟಿಸಿದ್ದು, ಮುಂದಿನ ದಿನಗಳಲ್ಲಿ ಕೇಂದ್ರದಿದ ಇನ್ನಷ್ಟು ಪರಿಹಾರ ರಾಜ್ಯಕ್ಕೆ ಬರಲಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿ ಕುಮಾರ್ ಹೇಳಿದ್ದಾರೆಯ

ನೆರೆ ಪರಿಹಾರದಿಂದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳನ್ನು ವೇಗವಾಗಿ ಕೈಗೊಳ್ಳಲು ನೆರವಾಗಲಿದೆ ಎಂದು ಬಿಜೆಪಿ ಸಚಿವರು ಹಾಗೂ ಮುಖಂಡರು ಹೇಳುತ್ತಿದ್ದರೆ, ವಿಳಂಬ ಮಾಡಿ ತುಂಬಾ ಅಲ್ಪ ಪ್ರಮಾಣದ ನೆರವು ನೀಡಲಾಗಿದೆ ಎಂದು ಪ್ರತಿಪಕ್ಷಗಳು ಟೀಕಿಸಿವೆ. ನೆರೆಯಿಂದಾಗಿ 35 ಸಾವಿರ ಕೋಟಿಯಿಂದ 1 ಲಕ್ಷ ಕೋಟಿ ಮೊತ್ತದ ಹಾನಿಯಾಗಿದೆ ಎಂದು ರಾಜ್ಯಸರ್ಕಾರ ನಷ್ಟವನ್ನು ಅಂದಾಜಿಸಿತ್ತು.

ರಾಜ್ಯದ ಜನರ ಆಕ್ರೋಶಕ್ಕೆ ಮಣಿದು ಕೇಂದ್ರ ಸರ್ಕಾರ ನೆರೆ ಪರಿಹಾರ ಬಿಡುಗಡೆ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

 ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಹಣ ಸಾಕಾಗುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ತುಂಬಾ ವಿಳಂಬವಾಗಿ ತುಂಬಾ ಅಲ್ಪ ಪ್ರಮಾಣದ ನೆರವು ಬಿಡುಗಡೆ ಮಾಡಲಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ. 

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಉಪ ಮುಖ್ಯಮಂತ್ರಿ ಡಾ. ಅಶ್ವತ್ ನಾರಾಯಣ ಕೇಂದ್ರ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ . ಮುಂದಿನ ದಿನಗಳಲ್ಲಿ  ಇನ್ನೂ ಹೆಚ್ಚಿನ ನೆರವು ಸಿಗಲಿದೆ ಎಂಬ ವಿಶ್ವಾಸ ಇರುವುದಾಗಿ ಕಾನೂನು  ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ. ಸಿ. ಮಾಧುಸ್ವಾಮಿ ಹೇಳಿದ್ದಾರೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com