ಈಶಾನ್ಯ ರಾಜ್ಯಗಳಿಗೆ ಬಾಂಗ್ಲಾದೇಶದಿಂದ ಎಲ್ ಪಿಜಿ ಸಂಪರ್ಕ ಸೇರಿ ಏಳು ಒಪ್ಪಂದಕ್ಕೆ ದೆಹಲಿ - ಢಾಕಾ ಸಹಿ

ಈಶಾನ್ಯ ರಾಜ್ಯಗಳಿಗೆ ಬಾಂಗ್ಲಾದೇಶದಿಂದ ಎಲ್ ಪಿಜಿ ಸಂಪರ್ಕ ಸೇರಿದಂತೆ ಏಳು ಪ್ರಮುಖ ಒಪ್ಪಂದಗಳಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತ ಪ್ರವಾಸದಲ್ಲಿರುವ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಶನಿವಾರ ಸಹಿ ಹಾಕಿದ್ದಾರೆ. ಅಲ್ಲದೆ ಮೂರು ಮಹತ್ವದ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.
ಶೇಖ್ ಹಸೀನಾ - ನರೇಂದ್ರ ಮೋದಿ
ಶೇಖ್ ಹಸೀನಾ - ನರೇಂದ್ರ ಮೋದಿ

ನವದೆಹಲಿ: ಈಶಾನ್ಯ ರಾಜ್ಯಗಳಿಗೆ ಬಾಂಗ್ಲಾದೇಶದಿಂದ ಎಲ್ ಪಿಜಿ ಸಂಪರ್ಕ ಸೇರಿದಂತೆ ಏಳು ಪ್ರಮುಖ ಒಪ್ಪಂದಗಳಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತ ಪ್ರವಾಸದಲ್ಲಿರುವ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಶನಿವಾರ ಸಹಿ ಹಾಕಿದ್ದಾರೆ. ಅಲ್ಲದೆ ಮೂರು ಮಹತ್ವದ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.

ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಶೇಖ್ ಹಸೀನಾ ಅವರು, ಬಾಂಗ್ಲಾ ರಾಜಧಾನಿ ಢಾಕಾದ ರಾಮಕೃಷ್ಣ ಮಿಷನ್‍ನಲ್ಲಿ ನಾಲ್ಕು ಅಂತಸ್ತುಗಳ ವಿವೇಕಾನಂದ ಭವನ ಉದ್ಘಾಟನೆ, ಕಲ್ನಾದಲ್ಲಿ ಭಾರತ-ಬಾಂಗ್ಲಾ ಕೌಶಲ್ಯ ಅಭಿವೃದ್ಧಿ ಕೇಂದ್ರ ಸಮರ್ಪಣೆ ಹಾಗೂ ತ್ರಿಪುರಾದಲ್ಲಿ ಉಭಯ ದೇಶಗಳ ನಡುವಣ ಎಲ್‍ಪಿಜಿ ಸಂಪರ್ಕ ವ್ಯವಸ್ಥೆಗೆ ಚಾಲನೆ ನೀಡಿದರು.

ಸಾರಿಗ ಸಂಪರ್ಕ, ನಿರ್ಮಾಣ ಹಾಗೂ ಸಾಂಸ್ಕೃತಿಕ ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಹಕಾರವನ್ನು ವಿಸ್ತರಿಸುವ ಬಗ್ಗೆ ಉಭಯ ನಾಯಕರು ದ್ವೀಪಕ್ಷೀಯ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಭಾರತವು ಬಾಂಗ್ಲಾದೇಶದೊಂದಿಗಿನ ತನ್ನ ಸಂಬಂಧಗಳಿಗೆ ಆದ್ಯತೆ ನೀಡುತ್ತದೆ ಮತ್ತು ಎರಡು ನೆರೆಯ ರಾಷ್ಟ್ರಗಳ ನಡುವಿನ ಸಹಕಾರವನ್ನು ಹೆಚ್ಚಿಸುವುದು ಹಾಗೂ ಅದು ಇಡೀ ಜಗತ್ತಿಗೆ ಮಾದರಿಯಾಗಬೇಕು. "ಇಂದಿನ ಮಾತುಕತೆಗಳು ನಮ್ಮ ದ್ವಿಪಕ್ಷೀಯ ಸಂಬಂಧಗಳನ್ನು ಇನ್ನಷ್ಟು ಚೈತನ್ಯಗೊಳಿಸುತ್ತವೆ ಎಂದು ಅವರು ದ್ವಿಪಕ್ಷೀಯ ಮಾತುಕತೆ ಬಳಿಕ ಹಸೀನಾ ಅವರ ಸಮ್ಮುಖದಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ.

ಹಸೀನಾ ಅವರು ಟೀಸ್ತಾ ನದಿ ನೀರು ಹಂಚಿಕೆ ಒಪ್ಪಂದ ಮತ್ತು ಇತರ ಸಾಮಾನ್ಯ ನದಿಗಳ ನೀರನ್ನು ಹಂಚಿಕೊಳ್ಳುವ ಬಗ್ಗೆಯೂ ಪ್ರಧಾನಿ ಮೋದಿಯೊಂದಿಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.

ದ್ವಿಪಕ್ಷೀಯ ಮಾತುಕತೆಯ ಕೊನೆಯಲ್ಲಿ ಹೊರಡಿಸಿದ ಜಂಟಿ ಹೇಳಿಕೆಯು ಉಭಯ ರಾಷ್ಟ್ರಗಳ ನಡುವಿನ ಅಂತಾರಾಷ್ಟ್ರೀಯ ಗಡಿಯಲ್ಲಿ ಬಾಕಿ ಇರುವ ಎಲ್ಲಾ ಕ್ಷೇತ್ರಗಳಲ್ಲಿನ ಸಮಸ್ಯೆ ಪೂರ್ಣಗೊಳಿಸಲು ಉಭಯ ನಾಯಕರು ಆಯಾ ಗಡಿ ಪಡೆಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ತಿಳಿಸಿದೆ.

ಮೋದಿ ಮತ್ತು ಬಾಂಗ್ಲಾ ನಿಯೋಗ, ವಿಪತ್ತು ನಿರ್ವಹಣಾ ಕ್ಷೇತ್ರದಲ್ಲಿ ಸಹಕಾರವನ್ನು ಹೆಚ್ಚಿಸಲು ಒಪ್ಪಿದೆ. ವಿಪತ್ತು ನಿರ್ವಹಣಾ ಸಹಕಾರ ಕ್ಷೇತ್ರದಲ್ಲಿ ಒಂದು ಒಪ್ಪಂದವನ್ನು ಸಮಯಕ್ಕೆ ಅನುಗುಣವಾಗಿ ಪೂರ್ಣಗೊಳಿಸಲು ಕರೆ ನೀಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com