ಮೈಸೂರು ದಸರಾ ಮೇಲೆ ಉಗ್ರರ ಕೆಂಗಣ್ಣು: ಸ್ಫೋಟಕ್ಕೆ ಸಂಚು, 4 ಶಂಕಿತ ಉಗ್ರರ ಬಂಧನ?

ದಸರಾ ಉತ್ಸವದ ಮೇಲೆ ಸ್ಫೋಟಕ್ಕೆ ಸಂಚು ರೂಪಿಸಿದ್ದ ಶಂಕೆ ಮೇಲೆಗೆ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ನಾಲ್ವರು ಶಂಕಿತ ಉಗ್ರರನ್ನು ರಾಷ್ಟ್ರೀಯ ಭದ್ರತಾ ಪಡೆ (ಎನ್ಐಎ) ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆಂದು ವರದಿಗಳು ತಿಳಿಸಿವೆ. 

Published: 06th October 2019 09:56 AM  |   Last Updated: 06th October 2019 09:58 AM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : Online Desk

ಮಂಡ್ಯ: ದಸರಾ ಉತ್ಸವದ ಮೇಲೆ ಸ್ಫೋಟಕ್ಕೆ ಸಂಚು ರೂಪಿಸಿದ್ದ ಶಂಕೆ ಮೇಲೆಗೆ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ನಾಲ್ವರು ಶಂಕಿತ ಉಗ್ರರನ್ನು ರಾಷ್ಟ್ರೀಯ ಭದ್ರತಾ ಪಡೆ (ಎನ್ಐಎ) ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆಂದು ವರದಿಗಳು ತಿಳಿಸಿವೆ. 

ಮೈಸೂರು ದಸರಾ ಉತ್ಸವದ ಮೇಲೆ ಸ್ಫೋಟಕ್ಕೆ ಸಂಚು ರೂಪಿಸಿದ್ದಾರೆಂದು ಹೇಳಲಾಗುತ್ತಿದ್ದು. ಇದರಂತೆ ಶಂಕಿತ ಉಗ್ರರು ಶ್ರೀರಂಗಪಟ್ಟಣದಲ್ಲಿ ಸ್ಯಾಟಲೈಟ್ ಫೋನ್ ಬಳಕೆ ಮಾಡಿದ್ದು, ಈ ಬಗ್ಗೆ ಮಾಹಿತಿ ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ಈ ಹಿನ್ನಲೆಯಲ್ಲಿ ಶೋಧಕಾರ್ಯ ನಡೆಸಿದ್ದ ಅಧಿಕಾರಿಗಳು ನಾಲ್ವರು ಶಂಕಿತರನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ. 

ಪ್ರಸ್ತುತ ಬಂಧನಕ್ಕೊಳಪಡಿಸಿರುವ ಶಂಕಿತರು ಪಾಕಿಸ್ತಾನದ ಕರಾಚಿ ಮೂಲದವರೆಂದು ಹೇಳಲಾಗುತ್ತಿದ್ದು, ವಿಚಾರಣೆಗಾಗಿ ನಾಲ್ವರನ್ನೂ ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆಂದು ಮೂಲಗಳು ತಿಳಿಸಿವೆ. 

ಉತ್ಸವಕ್ಕೆ ಉಗ್ರರು ಕೆಂಗಣ್ಣು ಬೀರಿರುವ ಹಿನ್ನಲೆಯಲ್ಲಿ ಮೈಸೂರು ಸೇರಿದಂದೆ ರಾಜ್ಯದಾದ್ಯಂತ ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ರವಾನಿಸಿದೆ ಎಂದು ವರದಿಗಳು ತಿಳಿಸಿವೆ. 

Stay up to date on all the latest ರಾಜ್ಯ news with The Kannadaprabha App. Download now
facebook twitter whatsapp