ಪ್ರವಾಹದಿಂದ ಒಟ್ಟಾರೆ ರೂ.35,000 ಕೋಟಿ ನಷ್ಟವಾಗಿದೆ, ಕೇಂದ್ರದ ಬಳಿ ಮತ್ತಷ್ಟು ಪರಿಹಾರ ಕೇಳುತ್ತೇವೆ: ಸಿಎಂ 

ಪ್ರವಾಹದಿಂದ ರಾಜ್ಯದೆಲ್ಲೆಡೆ ಒಟ್ಟಾರೆಯಾಗಿ ರೂ.35,000 ಕೋಟಿ ನಷ್ಟವುಂಟಾಗಿದ್ದು, ಕೇಂದ್ರ ಸರ್ಕಾರದ ಬಳಿ ಮತ್ತಷ್ಟು ಪರಿಹಾರ ಕೇಳಲಾಗುತ್ತೆದ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಹೇಳಿದ್ದಾರೆ. 
ಯಡಿಯೂರಪ್ಪ
ಯಡಿಯೂರಪ್ಪ

ವಿಜಯಪುರ: ಪ್ರವಾಹದಿಂದ ರಾಜ್ಯದೆಲ್ಲೆಡೆ ಒಟ್ಟಾರೆಯಾಗಿ ರೂ.35,000 ಕೋಟಿ ನಷ್ಟವುಂಟಾಗಿದ್ದು, ಕೇಂದ್ರ ಸರ್ಕಾರದ ಬಳಿ ಮತ್ತಷ್ಟು ಪರಿಹಾರ ಕೇಳಲಾಗುತ್ತೆದ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಹೇಳಿದ್ದಾರೆ. 

ಮಧ್ಯಂತರ ಪರಿಹಾರವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಪರಿಹಾರ ಬರುತ್ತಿದ್ದಂತೆಯೇ ಎಲ್ಲಾ ಕೆಲಸಗಳನ್ನು ತ್ವರಿತಗತಿಯಲ್ಲಿ ಮಾಡಲಾಗುತ್ತದೆ. ಹಣ ಬಂದ ಬಳಿಕ ಇದೀಗ ಮೋದಿ ಬಗ್ಗೆ ಟೀಕೆ ಮಾಡುತ್ತಿರುವವರ ಬಾಯಿ ಮುಚ್ಚುತ್ತದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಅಥವಾ ಸೋಮವಾರ ಹಣವನ್ನು ಬಿಡುಗಡೆ ಮಾಡಲಿದ್ದಾರೆಂದು ಹೇಳಿದ್ದಾರೆ. 

ದೇಶದ ಇನ್ನೂ ಹಲವು ರಾಜ್ಯಗಳೂ ಕೂಡ ಪ್ರವಾಹದಿಂದ ತತ್ತರಿಸಿದ್ದು, ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಧ್ಯಂತರ ಪರಿಹಾರ ಬಿಡುಗಡೆ ಮಾಡಿದೆ. ಪ್ರಸ್ತುತ ರಾಜ್ಯದಲ್ಲಿ ಪ್ರವಾಹದಿಂದಾಗಿ ರೂ.35,000 ಕೋಟಿ ನಷ್ಟವುಂಟಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಪರಿಹಾರಕ್ಕೆ ಆಗ್ರಹಿಸಲಾಗುತ್ತದೆ. ಮತ್ತೊಮ್ಮೆ ಪ್ರಸ್ತಾವನೆಯನ್ನು ಸಲ್ಲಿಸಲಾಗುತ್ತದೆ ಎಂದು ತಿಳಿಸಿದ್ದಾರೆ. 

ಇದೇ ವೇಳೆ ಜೆಡಿಎಸ್ ನಾಯಕ ಕುಮಾರಸ್ವಾಮಿಯವರು ನೀಡಿದ್ದ ಯಡಿಯೂರಪ್ಪ ಹಾಗೂ ಪ್ರಧಾನಮಂತ್ರಿಗಳ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಇವೆಲ್ಲಾ ಆಧಾರ ರಹಿತವಾದ ಆರೋಪಗಳು. ಪ್ರಧಾನಿ ಮೋದಿ ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ. ಹತಾಶೆಯಿಂದ ಕುಮಾರಸ್ವಾಮಿ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇಂತಹ ಆರೋಪಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಪ್ರವಾಹ ಪರಿಹಾರದತ್ತ ನಾನು ಗಮನಹರಿಸುತ್ತೇನೆಂದಿದ್ದಾರೆ. 

ರಾಜ್ಯದ ಪ್ರವಾಹ ಪರಿಹಾರ ಕಾರ್ಯಗಳ ಕುರಿತು ಟೀಕೆ ಮಾಡುತ್ತಿರುವವರ ವಿರುದ್ಧ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ. 

ಪ್ರವಾಹ ಪರಿಹಾರ ಕಾರ್ಯಗಳ ಕುರಿತು ಟೀಕೆಗಳು ಆಧಾರರಹಿತವಾದದ್ದು ಹಾಗೂ ರಾಜಕೀಯ ಪ್ರೇರಿತವಾದದ್ದು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೂಕ್ತ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com