ಬೆಂಗಳೂರಿನಲ್ಲಿ ಮತ್ತೆ 3 ದಿನ ಮಳೆ ಆರ್ಭಟ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಮೂರು ದಿನಗಳ ಕಾಲ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಮೂರು ದಿನಗಳ ಕಾಲ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದೊಂದು ವಾರದಿಂದ ಆಗಾಗ ಪ್ರತ್ಯಕ್ಷನಾಗಿ ಆರ್ಭಟಿಸುವ ಮಳೆರಾಯ ಇನ್ನೂ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ವರ್ಷಧಾರೆ ಸುರಿಸಲಿದ್ದಾನೆ. ಈ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಅಕ್ಟೋಬರ್ 12ರವೆರಗೂ ಮಳೆ ಮುಂದುವರೆಯಲಿದೆ ಎಂದು ಹೇಳಲಾಗಿದೆ.

ನಗರದಲ್ಲಿ ಮಂಗಳವಾರವೂ ಮಳೆಯ ಆರ್ಭಟ ಮುಂದುವರಿದ ಪರಿಣಾಮ, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಇದರಿಂದ ನವರಾತ್ರಿ ಉತ್ಸವ ಆಚರಣೆಗೂ ಅಡ್ಡಿಯಾಯಿತು. ಇದರ ನಡುವೆ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ಅ. 9ರಿಂದ 12ರವರೆಗೆ ನಗರದಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆಗಳಿವೆ ಎಂದು ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com