15 ವರ್ಷ ತುಂಬಿದವರು ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಅರ್ಹರು: ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 

ಹತ್ತನೇ ತರಗತಿ ಪರೀಕ್ಷೆಯನ್ನು ಬರೆಯುವ ಖಾಸಗಿ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. 15 ವರ್ಷ ತುಂಬಿದವರು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಬಹುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಹೊಸ ಆದೇಶ ಹೊರಡಿಸಿದೆ.
ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ
ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ

ಬೆಂಗಳೂರು: ಹತ್ತನೇ ತರಗತಿ ಪರೀಕ್ಷೆಯನ್ನು ಬರೆಯುವ ಖಾಸಗಿ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. 15 ವರ್ಷ ತುಂಬಿದವರು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಬಹುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಹೊಸ ಆದೇಶ ಹೊರಡಿಸಿದೆ.

ಈ ಮೊದಲು 15 ವರ್ಷಕ್ಕೆ ಕಾಲಿಟ್ಟ ಯಾವುದೇ ಅಭ್ಯರ್ಥಿ ಖಾಸಗಿಯಾಗಿ ಎಸ್.ಎಸ್.ಎಲ್.ಸಿ. ಪರೀಕ್ಷೆ ತೆಗೆದುಕೊಳ್ಳಲು ಅವಕಾಶವಿತ್ತು. ಆದರೆ ಸಾಮಾನ್ಯ ವಿದ್ಯಾರ್ಥಿಗಳು ಆ ಸಂದರ್ಭದಲ್ಲಿ ಪೂರ್ಣಗೊಳಿಸಿರುತ್ತಾರೆ. ಇದರಿಂದಾಗಿ ಖಾಸಗಿ ಅಭ್ಯರ್ಥಿಗಳು ಹಾಗೂ ಸಾಮಾನ್ಯ ವಿದ್ಯಾರ್ಥಿಗಳ ನಡುವೆ ವಯಸ್ಸಿನ ಅಂತರವಿರುತ್ತಿತ್ತು.

ಹೀಗಾಗಿ  2020 ಮಾರ್ಚ್ 1ನೇ ತಾರೀಕಿಗೆ 15 ವರ್ಷ ಪೂರೈಸುವ ಅಭ್ಯರ್ಥಿಗಳು ಮಾತ್ರ ಖಾಸಗಿಯಾಗಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಳ್ಳಲಾಗುತ್ತದೆ.

ಈ ನಿಯಮ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬಂದಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹೇಳಿದೆ.

ಮಾರ್ಚ್ ಒಂದನೇ ತಾರೀಕಿಗೆ 15 ವರ್ಷ ತುಂಬಿದವರಿಗೆ ಮಾತ್ರ ಅವಕಾಶ ಇರುತ್ತದೆ. ಮಾಹಿತಿ ಹಕ್ಕು ಕಾಯಿದೆ ಅಡಿ ಐದು ವರ್ಷ 10 ತಿಂಗಳು ತುಂಬಿದ ಮಗು ಶಾಲೆಗೆ ಸೇರಲು ಅವಕಾಶವಿತ್ತು, ಅದಾದ ನಂತರ ಪರಿಷ್ಕೃತ ಕಾಯಿದೆಯಲ್ಲಿ 5 ವರ್ಷ 5 ತಿಂಗಳು ತುಂಬಿದ ಮಕ್ಕಳಿಗೆ 1ನೇ ತರಗತಿಗೆ ಸೇರಲು ಅವಕಾಶ ಕಲ್ಪಿಸಲಾಗಿತ್ತು. ಹೀಗಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಗೆ ಗೊಂದಲ ಆಗದಿರಲಿ ಎಂಬ ಕಾರಣಕ್ಕೆ 15 ವರ್ಷ ತುಂಬಿದವರು 10ನೇ ತರಗತಿ ಪರೀಕ್ಷೆ ಬರೆಯಬಹುದು ಎಂಬ ಹೊಸ ನಿಯಮ ಜಾರಿಗೆ ತರಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com