ರಾಜೀವ್ ಗಾಂಧಿ ಆರೋಗ್ಯ ವಿವಿ ಕ್ಯಾಂಪಸ್ ಸ್ಥಳಾಂತರಕ್ಕೆ ಉಪಮುಖ್ಯಮಂತ್ರಿ ಗ್ನೀನ್ ಸಿಗ್ನಲ್ 

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕೇಂದ್ರ ಕಚೇರಿಯನ್ನು ಬೆಂಗಳೂರಿನಿಂದ ರಾಮನಗರಕ್ಕೆ ಸ್ಥಳಾಂತರಿಸಲು ಉಪ ಮುಖ್ಯಮಂತ್ರಿ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಡಾ. ಅಶ್ವತ್ ನಾರಾಯಣ್ ಗ್ನೀನ್ ಸಿಗ್ನಲ್ ನೀಡಿದ್ದಾರೆ.
ಉಪಮುಖ್ಯಮಂತ್ರಿ ಡಾ. ಅಶ್ವತ್ ನಾರಾಯಣ್
ಉಪಮುಖ್ಯಮಂತ್ರಿ ಡಾ. ಅಶ್ವತ್ ನಾರಾಯಣ್

ಬೆಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕೇಂದ್ರ ಕಚೇರಿಯನ್ನು ಬೆಂಗಳೂರಿನಿಂದ ರಾಮನಗರಕ್ಕೆ ಸ್ಥಳಾಂತರಿಸಲು ಉಪ ಮುಖ್ಯಮಂತ್ರಿ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಡಾ. ಅಶ್ವತ್ ನಾರಾಯಣ್ ಗ್ನೀನ್ ಸಿಗ್ನಲ್ ನೀಡಿದ್ದಾರೆ.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲವನ್ನು ರಾಮನಗರಕ್ಕೆ ಸ್ಥಳಾಂತರಿಸಲು ವಿರೋಧ ವ್ಯಕ್ತಪಡಿಸಿಲ್ಲ, ಆದಾಗ್ಯೂ, ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿರುವುದಾಗಿ ತಿಳಿಸಿದರು. ಈ ಹಿಂದೆ ಆರೋಗ್ಯ ವಿವಿ ಸ್ಥಳಾಂತರಕ್ಕೆ ಡಾ. ಅಶ್ವತ್ ನಾರಾಯಣ್ ಅವರೇ ವಿರೋಧ ವ್ಯಕ್ತಪಡಿಸಿದ್ದರು. 

ರಾಮನಗರ ಹೊರತುಪಡಿಸಿ ಎಲ್ಲಾ ಜಿಲ್ಲೆಗಳಿಗೂ  ವೈದ್ಯಕೀಯ ಕಾಲೇಜುಗಳನ್ನು ಮಂಜೂರು ಮಾಡಲಾಗಿದೆ.  ರಾಮನಗರದಲ್ಲಿ ಸಹ ಒಂದು ವೈದ್ಯಕೀಯ ಕಾಲೇಜು ಇರಬೇಕಾಗುತ್ತದೆ.  ಈವರೆಗೂ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯಕ್ಕೆ ಭೂಮಿಯನ್ನು ಹಸ್ತಾಂತರಿಸಲಾಗಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. 

ಕ್ಯಾಂಪಸ್ ಗಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಕಟ್ಟಡ ನಿರ್ಮಾಣ ಇನ್ನೂ ಪ್ರಾರಂಭವಾಗಿಲ್ಲ.ಕ್ಯಾಂಪಸ್ ಸ್ಥಳಾಂತರಕ್ಕೆ ಮೈತ್ರಿ ಸರ್ಕಾರದಲ್ಲಿ ಅನುಮೋದನೆ ನೀಡಲಾಗಿತ್ತು. ಆದರೆ, ಮಾರ್ಚ್ 2018ರಲ್ಲಿ ನ್ಯಾಯಾಲಯಕ್ಕೆ ದೂರು ಸಲ್ಲಿಕೆಯಾಗಿದ್ದರಿಂದ ಸ್ಥಳಾಂತರ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ರಾಮನಗರದಲ್ಲಿನ ಹಳೆಯ ಜಿಲ್ಲಾಧಿಕಾರಿ ಕಚೇರಿಯನ್ನು ಆರೋಗ್ಯ ವಿವಿ ಆಡಳಿತಾತ್ಮಕ ಕಚೇರಿಯನ್ನಾಗಿ ಮಾಡಿಕೊಳ್ಳುವ  ಉದ್ದೇಶವಿದೆ. ಆದಾಗ್ಯೂ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com