ಅನುದಾನ ಬಳಕೆ ಮಾಡಿ ನೆರೆಪೀಡಿತ ಶಾಲಾ ಕಟ್ಟಡ ದುರಸ್ತಿ ಮಾಡಿ: ಶಿಕ್ಷಣ ಸಚಿವ

ಪ್ರವಾಹ ಪರಿಹಾರ ಅನುದಾನವಾದಿ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಹಣವನ್ನು ಬಳಕೆ ಮಾಡಿಕೊಂಡು ತುರ್ತಾಗಿ ಶಾಲಾ ಕಟ್ಟಡಗಳ ದುರಸ್ತಿ ಕಾರ್ಯಗಳನ್ನು ಕೈಗೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಬುಧವಾರ ಸೂಚನೆ ನೀಡಿದ್ದಾರೆ. 
ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್
ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್

ಬೆಂಗಳೂರು: ಪ್ರವಾಹ ಪರಿಹಾರ ಅನುದಾನವಾದಿ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಹಣವನ್ನು ಬಳಕೆ ಮಾಡಿಕೊಂಡು ತುರ್ತಾಗಿ ಶಾಲಾ ಕಟ್ಟಡಗಳ ದುರಸ್ತಿ ಕಾರ್ಯಗಳನ್ನು ಕೈಗೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಬುಧವಾರ ಸೂಚನೆ ನೀಡಿದ್ದಾರೆ. 

ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರೊಂದಿಗೆ ವಿಕಾಸಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಸಚಿವರು, ಪರಿಹಾರ ಅನುದಾನವಾಗಿ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ರೂ.500 ಕೋಟಿ ಹಾಗೂ ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಪಂಚಾಯತ್ ಗಳ ಖಾತೆಯಲ್ಲಿರುವ ರೂ.250 ಕೋಟಿ ಗಳನ್ನು ಬಳಕೆ ಮಾಡಿಕೊಂಡು ನೆರೆ ಪೀಡಿತ ಪ್ರದೇಶಗಳಲ್ಲಿ ಹಾನಿಗೊಳಗಾಗಿರುವ ಶಾಲಾ ಕೊಠಡಿಗಳ ಮೂಲ ಸೌಕರ್ಯ ಕಾಮಗಾರಿಗಳನ್ನು ಕೂಡಲೇ ಕೈಗೊಳ್ಳುವಂತೆ ಸೂಚಿಸಿದ್ದಾರೆ. 

ಹಾನಿಗೊಳಗಾದ ಶಾಳೆಗಳನ್ನು ಸಂಪೂರ್ಣ, ಅಲ್ಪ ಪ್ರಮಾಣ, ಮಧ್ಯಮ ಪ್ರಮಾಣದಲ್ಲಿ ಹಾನಿಗೊಳಗಾದ ಶಾಲೆಗಳೆಂದು ಭಾಗ ಮಾಡಿಕೊಂಡು, ದುರಸ್ತಿ ಕಾರ್ಯ ನಡೆಸಬೇಕು. ಪ್ರತೀ ಶಾಲೆಗೆ ರೂ.2 ಲಕ್ಷಗಳ ವರೆಗೂ ವ್ಯಯಿಸಬಹುದಾಗಿದೆ. ಶಾಲೆಗಳು ಅಂಗನವಾಡಿಗಳು ಹಾಗೂ ಆಸ್ಪತ್ರೆಗಳ ದುರಸ್ತಿ ಕಾರ್ಯ ನಡೆಸುವಂತೆ ತಿಳಿಸಲಾಗಿದೆ. 

ಡಿಪಿಐ ಆಯುಕ್ತ ಡಾ.ಕೆ.ಜಿ.ಜಗದೀಶ್ ಅವರು ಮಾತನಾಡಿ, ಶಾಸಕರು, ಸಂಸದರು ಹಾಗೂ ಸಿಎಸ್ಆರ್, ವಿಶೇಷ ಅಭಿವೃದ್ಧಿ ಯೋಜನೆ ಹಾಗೂ ವಿಶೇಷ ಅನುದಾನಗಳನ್ನು ಬಳಕೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. 

ಇದೇ ವೇಳೆ 7ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ಪ್ರಾರಂಭಿಸುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, 10ನೇ ತರಗತಿಯಲ್ಲಿ ಮಕ್ಕಳು ಪಬ್ಲಿಕ್ ಪರೀಕ್ಷೆಯನ್ನು ಎದುರಿಸಬೇಕಾಗುತ್ತದೆ. ಈ ವೇಳೆ ಅವರಿಗೆ ಆತಂಕಗಳನ್ನು ದೂರ ಮಾಡುವ ಸಲುವಾಗಿ 7ನೇ ತರಗತಿಯಲ್ಲೇ ಪಬ್ಲಿಕ್ ಪರೀಕ್ಷೆಗಳನ್ನು ಆರಂಭಿಸಲು ಚಿಂತಿಸಲಾಗಿದೆ. ಫಲಿತಾಂಶದ ಆಧಾರದ ಮೇಲೆ ಮಕ್ಕಳನ್ನು ಉತ್ತೀರ್ಣ ಹಾಗೂ ಅನುತ್ತೀರ್ಣತೆಯನ್ನು ನಿರ್ಧರಿಸಲಾಗುತ್ತದೆ ಎಂದಿದ್ದಾರೆ. 

ಪ್ರತೀ ವಾರ ಡಿಡಿಪಿಐ ಹಾಗೂ ಸ್ಥಳೀಯ ಶಿಕ್ಷಣಾಧಿಕಾರಿಗಳು ಐದು ಶಾಲೆಗಳಿಗೆ ಭೇಟಿ ನೀಡಿ, ಪಬ್ಲಿಕ್ ಪರೀಕ್ಷೆ ಕುರಿತಂತೆ ಮಕ್ಕಳಿಕೆ ಶಿಕ್ಷಣ ನೀಡುತ್ತಾರೆ. ಈ ಮೂಲಕ ಮಕ್ಕಳು ಮಾನಸಿಕವಾಗಿ ಸಿದ್ಧಗೊಳ್ಳುವಂತೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com