ಯಾವ ಪೆನ್ ಡ್ರೈವ್, ಅದರ ಬಗ್ಗೆ ನನಗೇನು ಗೊತ್ತಿಲ್ಲ: ಅಲೋಕ್ ಕುಮಾರ್ 

 ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಫೋನ್ ಟ್ಯಾಪಿಂಗ್ ಹಗರಣದ ಪೆನ್ ಡ್ರೈವ್ ಎಲ್ಲಿದೆ ಎಂಬದು ಸದ್ಯಕ್ಕೆ ಎಲ್ಲರನ್ನೂ ಕಾಡುತ್ತಿರುವ ಪ್ರಶ್ನೆಯಾಗಿದೆ.
ಅಲೋಕ್ ಕುಮಾರ್
ಅಲೋಕ್ ಕುಮಾರ್

ಬೆಂಗಳೂರು:  ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಫೋನ್ ಟ್ಯಾಪಿಂಗ್ ಹಗರಣದ ಪೆನ್ ಡ್ರೈವ್ ಎಲ್ಲಿದೆ ಎಂಬದು ಸದ್ಯಕ್ಕೆ ಎಲ್ಲರನ್ನೂ ಕಾಡುತ್ತಿರುವ ಪ್ರಶ್ನೆಯಾಗಿದೆ.

ಪೆನ್ ಡ್ರೈವ್ ನಲ್ಲಿರುವ ಮಾಹಿತಿಯನ್ನು ಡೌನ್ ಲೋಡ್ ಮಾಡಲು ಸಿಸಿಬಿ ಅಧಿಕಾರಿಗಳಿಗೆ ಯಾರು ಹೇಳಿದ್ದು ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ.

ಮಾಜಿ ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರಿಗೆ ಈ ಬಗ್ಗೆ ಪ್ರಶ್ನಿಸಿದರೇ, ನನಗೆಯಾವ ಪೆನ್ ಡ್ರೈವ್ ಬಗ್ಗೆಯೂ ಗೊತ್ತಿಲ್ಲ ಎಂದು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪೆನ್ ಡ್ರೈವ್ ನಲ್ಲಿ ಮೂರು ಆಡಿಯೋ ಕ್ಲಿಪ್ ನಲ್ಲಿರುವ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮತ್ತು ಬ್ರೋಕರ್ ಪರಾಜ್ ಅಹ್ಮದ್ ಎಂಬುವರ ನಡುವೆ ನಡೆದಿರುವ ಸಂಭಾಷಣೆಯನ್ನು ಡೌನ್ ಲೋಡ್ ಮಾಡಲು ಅಲೋಕ್ ಕುಮಾರ್ ಹೇಳಿದ್ದಾರೆಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಸಿಬಿಐ ಅಧಿಕಾರಿಗಳ ವಿಚಾರಣೆ ವೇಳೆ ಅಲೋಕ್ ಕುಮಾರ್ ತಮಗೆ .ಯಾವ ಪೆನ್ ಡ್ರೈವ್ ಬಗ್ಗೆಯೂ ತಿಳಿದಿಲ್ಲವೆಂದು ಹೇಳಿದ್ದಾರೆಂದು ಮೂಲಗಳು ತಿಳಿಸಿವೆ.

ಅಲೋಕ್ ಕುಮಾರ್ ಅವರ ಆದೇಶದಂತೆ  ಪೆನ್ ಡ್ರೈವ್ ನಲ್ಲಿದ್ದ  ಆಡಿಯೋ ಫೈಲ್ ಗಳನ್ನು ಡೌನ್ ಲೋಡ್ ಮಾಡುವಂತೆ ಹೇಳಿದ್ದರು, ಅದರಂತೆ ನಾವು ಡೌನ್ ಲೋಡ್ ಮಾಡಿದ್ದೆವು ಎಂದು ಸಿಸಿಬಿ  ಇಬ್ಬರು ಪೊಲೀಸ್ ಇನ್ಸ್ ಪೆಕ್ಟರ್ ಮಾಲ್ತೇಶ್ ಮತ್ತು ಮಿರ್ಜಾ ಅಲಿ ಅವರು ಸಿಬಿಐ ಅಧಿಕಾರಿಗಳ ಮುಂದೆ ಒಪ್ಪಿಕೊಂಡಿದ್ದರು.

ಈ ಫೈಲ್‌ಗಳನ್ನು ಕೆಲವು ದೃಶ್ಯ ಮಾಧ್ಯಮ ವ್ಯಕ್ತಿಗಳಿಗೆ ತಮ್ಮ ವಾಟ್ಸಾಪ್ ಸಂಖ್ಯೆಯಲ್ಲಿ  ಇನ್ನೊಬ್ಬ ಐಪಿಎಸ್ ಅಧಿಕಾರಿ ಕಳುಹಿಸಿದ್ದಾರೆ, ಅವರು ಅಲೋಕ್ ಕುಮಾರ್‌ಗೆ ಹತ್ತಿರವಾಗಿದ್ದಾರೆ ಎಂದು ವರದಿಯಾಗಿತ್ತು. ಹಾಗಿದ್ದರೂ  ಅಲೋಕ್ ಕುಮಾರ್ ತಮ್ಮ ಇದ್ಯಾವುದನ್ನು ಒಪ್ಪಿಕೊಳ್ಳುತ್ತಿಲ್ಲ,

ಸಿಬಿಐ ಅಧಿಕಾರಿಗಳು ಬೆಂಗಳೂರಿನ ಕೆಲವು ಮಾಧ್ಯಮದವರನ್ನು ಪ್ರಶ್ನಿಸಿದ್ದಾರೆ ಎನ್ನಲಾಗಿದೆ, ವಿವಾದಾತ್ಮಕ ಆಡಿಯೋ ಟೇಪ್ ಬಗ್ಗೆ ವಿಚಾರಣೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ, 

ಸಿಬಿಐ, ಈ ಪ್ರಕರಣದಲ್ಲಿ ಸಲ್ಲಿಸಿದ ಡಿಜಿಟಲ್ ಪುರಾವೆಗಳನ್ನು ಪರಿಶೀಲಿಸುತ್ತಿರುವ ನವದೆಹಲಿಯ ಸೆಂಟ್ರಲ್ ಫೊರೆನ್ಸಿಕ್ ಲ್ಯಾಬೊರೇಟರಿ ಶೀಘ್ರದಲ್ಲೇ ತನ್ನ ವರದಿಯನ್ನು ಸಲ್ಲಿಸುವ ಸಾಧ್ಯತೆಯಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com