ನೆರೆ ಸಂತ್ರಸ್ಥರ ಪರಿಹಾರ ಕಾರ್ಯ ಕೈಗೊಳ್ಳುವಲ್ಲಿ ಸರ್ಕಾರ ಸತ್ತಿದೆ: ಕೋಡಿಹಳ್ಳಿ ಚಂದ್ರಶೇಖರ್

ನೆರೆ ಹಾವಳಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಜನರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಿಹಾರ ಕಲ್ಪಿಸಲು ನಿರ್ಲಕ್ಷ್ಯ ವಹಿಸುತ್ತಿವೆ ಎಂದು ಆರೋಪಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ನೂರಾರು ಕಾರ್ಯಕರ್ತರು ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ನೆರೆ ಹಾವಳಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಜನರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಿಹಾರ ಕಲ್ಪಿಸಲು ನಿರ್ಲಕ್ಷ್ಯ ವಹಿಸುತ್ತಿವೆ ಎಂದು ಆರೋಪಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ನೂರಾರು ಕಾರ್ಯಕರ್ತರು ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು.

ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ನಗರದ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಗುರುವಾರ ಬೆಳಗ್ಗೆ 11 ಗಂಟೆಗೆ ಪ್ರತಿಭಟನಾ ರ್ಯಾಲಿ ಹೊರಟ ರೈತರು, ವಿಧಾನಸೌಧ ಮುತ್ತಿಗೆ ಹಾಕಲು ಮುಂದಾದರು. ಈ ವೇಳೆ ಪೊಲೀಸರು ಫ್ರೀಡಂಪಾರ್ಕ್ ಮುಂಭಾಗದಲ್ಲಿ ಬ್ಯಾರಿಕೇಡ್ ಹಾಕಿ ರೈತರನ್ನು ತಡೆದರು. ರೈತರು ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಆಗಮಿಸಿ ರೈತರ ಬೇಡಿಕೆಗಳನ್ನು ಆಲಿಸಿದರು.

ಈ ವೇಳೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್ ಅವರು, ಸರ್ಕಾರ ಕೊಟ್ಟ ತಾತ್ಕಾಲಿಕ ಹಣ ಇನ್ನೂ ರೈತರಿಗೆ ತಲುಪಿಲ್ಲ. ಪರಿಹಾರದ ಕಾರ್ಯಕ್ರಮ ರೈತರಿಗೆ ತಲುಪಿಲ್ಲ. ಮನೆ ಕಳೆದುಕೊಂಡಿರುವವರಿಗೆ ಮನೆಯಿಲ್ಲ. ವಿಧಾನಸೌಧ ಮುತ್ತಿಗೆಗೆ ಮುಂದಾಗಿದ್ದೇವೆ. ಕೇಂದ್ರ ರಾಜ್ಯ ಸರ್ಕಾರಗಳ ಉತ್ತರವನ್ನು ನಿರೀಕ್ಷೆ ಮಾಡುತ್ತಿದ್ದೇವೆ. ನಿಮ್ಮ ಸುಳ್ಳುಗಳಿಗೆ ಸ್ಪಷ್ಟನೆ ಬೇಕಿದೆ. ನೆರೆ ಪೀಡಿತ ಪ್ರದೇಶಗಳಿಗೆ ಪರಿಹಾರ ವಿತರಣೆ ನೀಡುತ್ತಿಲ್ಲ. ಗಂಜಿಕೇಂದ್ರಗಳನ್ನು ಮುಚ್ಚುತ್ತಿದ್ದೀರಿ. ಸಾವಿರಾರು ಕೋಟಿಗಳು ನಿಮ್ಮ ಬಾಯಲ್ಲಿ ಬರುತ್ತಿವೆ ಅಷ್ಟೆ ಎಂದು ಕಿಡಿಕಾರಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com