ಕೋಲಾರ: ಬಾಲಕಿ ಅತ್ಯಾಚಾರ ಆರೋಪಿ ಮೇಲೆ ಗುಂಡು ಹಾರಿಸಿದ ಪೊಲೀಸ್ ಅಧಿಕಾರಿ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದ ವ್ಯಕ್ತಿಯ ಮೇಲೆ ಕೆಜಿಎಫ್ ರಾಬರ್ಟ್ ಸನ್ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಸೂರ್ಯ ಪ್ರಕಾಶ್ ಅವರು ಗುಂಡು ಹಾರಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕೋಲಾರ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದ ವ್ಯಕ್ತಿಯ ಮೇಲೆ ಕೆಜಿಎಫ್ ರಾಬರ್ಟ್ ಸನ್ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಸೂರ್ಯ ಪ್ರಕಾಶ್ ಅವರು ಗುಂಡು ಹಾರಿಸಿದ್ದಾರೆ.

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದ ತಮಿಳ್ ಅರಸನ್ ಅಲಿಯಾಸ್ ಕುಟ್ಟಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿ ಸುಜೀತ ಮೊಹಮ್ಮದ್ ಅವರು ಹೇಳಿದ್ದಾರೆ.

ಬಾಲಕಿ ಮೇಲೆ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಕುಟ್ಟಿ ವಿರುದ್ಧ ಕೇಸ್ ದಾಖಲಿಸಿಕೊಂಡಿದ್ದ ಪೊಲೀಸರು, ಆರೋಪಿಗಾಗಿ ಬಲೆ ಬೀಸಿದ್ದರು. ಕುಟ್ಟಿ ಅವಿತುಕುಳಿತಿದ್ದ ಸ್ಥಳದ ಮೇಲೆ ಪೊಲೀಸರು ದಾಳಿ ನಡೆಸಿದಾಗ ಆರೋಪಿ ಪೊಲೀಸರ ಮೇಲೆಯೇ ದಾಳಿ ನಡೆಸಿದ್ದಾನೆ. ಈ ವೇಳೆ ಆತ್ಮ ರಕ್ಷಣೆಗಾಗಿ ಸೂರ್ಯ ಪ್ರಕಾಶ್ ಅವರು ಎರಡು ಸುತ್ತು ಗುಂಡು ಹಾರಿಸಿದ್ದಾರೆ. 

ಒಂದು ಗುಂಡು ಕುಟ್ಟಿಯ ಬಲಗಾಲಿಗೆ ತಗುಲಿದ್ದು, ಗಂಭೀರವಾಗಿ ಗಾಯಗೊಂಡ ಆರೋಪಿಯನ್ನು ಕೆಜಿಎಫ್ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಯ ಸ್ಥಿತಿ ಸ್ಥಿರವಾಗಿದೆ ಎಂದು ಸುಜೀತ ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com