ಸ್ಪೀಕರ್ ಸಲಹೆಗಾರರಾಗಿ ನಿವೃತ್ತ ಅಧಿಕಾರಿ ಓಂ ಪ್ರಕಾಶ್ ನೇಮಕ: ಹೊಸ ಸಂಪ್ರದಾಯಕ್ಕೆ ಕಾಗೇರಿ ನಾಂದಿ

ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಧಾನಸಭೆ ನಿವೃತ್ತ ಕಾರ್ಯದರ್ಶಿಯನ್ನು ತಮ್ಮ ಸಲಹೆಗಾರರನ್ನಾಗಿ ನೇಮಿಸಿಕೊಳ್ಳುವ ಮೂಲಕ ಇದೇ ಮೊದಲ ಬಾರಿಗೆ ವಿಧಾನಸಭೆಯಲ್ಲಿ ಹೊಸ ಸಂಪ್ರದಾಯವೊಂದನ್ನು ಹುಟ್ಟುಹಾಕಿದ್ದಾರೆ.

Published: 15th October 2019 04:10 PM  |   Last Updated: 15th October 2019 04:10 PM   |  A+A-


Vishweshwar Hedge Kageri

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ

Posted By : Lingaraj Badiger
Source : UNI

ಬೆಂಗಳೂರು: ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಧಾನಸಭೆ ನಿವೃತ್ತ ಕಾರ್ಯದರ್ಶಿಯನ್ನು ತಮ್ಮ ಸಲಹೆಗಾರರನ್ನಾಗಿ ನೇಮಿಸಿಕೊಳ್ಳುವ ಮೂಲಕ ಇದೇ ಮೊದಲ ಬಾರಿಗೆ ವಿಧಾನಸಭೆಯಲ್ಲಿ ಹೊಸ ಸಂಪ್ರದಾಯವೊಂದನ್ನು ಹುಟ್ಟುಹಾಕಿದ್ದಾರೆ.

ನಿವೃತ್ತ ವಿಧಾನಸಭೆ ಕಾರ್ಯದರ್ಶಿ ಓಂ ಪ್ರಕಾಶ್ ಅವರು ಕಾಗೇರಿ ಅವರ ಸಲಹೆಗಾರರಾಗಿ ನೇಮಕಗೊಂಡಿದ್ದಾರೆ.

ವಿಧಾನಸಭೆ ಹಾಲಿ ಕಾರ್ಯದರ್ಶಿ ವಿಶಾಲಾಕ್ಷಿ ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಈ ನೇಮಕಾತಿ ಸ್ಪೀಕರ್ ಅವರಿಗೆ ಮಹಿಳಾ ಅಧಿಕಾರಿ ಮೇಲೆ ನಂಬಿಕೆ ಇಲ್ಲ ಎನ್ನುವುದನ್ನು ಎತ್ತಿ ತೋರಿಸುತ್ತದೆ ಎನ್ನುವ ಆರೋಪವೂ ಕೇಳಿ ಬಂದಿದೆ.

ಇನ್ನು ನಿವೃತ್ತ ಅಧಿಕಾರಿಯನ್ನು ಸಲಹೆಗಾರರನ್ನಾಗಿ ನೇಮಿಸಿಕೊಂಡಿದ್ದಕ್ಕೆ ಸಚಿವಾಲಯದಲ್ಲೇ ಸ್ಪೀಕರ್ ವಿರುದ್ದ ತೀವ್ರ ಅಸಮಾಧಾನ ವ್ಯಕ್ತವಾಗಿದೆ. 

ಸ್ಪೀಕರ್ ಕಾಗೇರಿಯವರಿಗೆ ಅನುಭವದ ಕೊರತೆಯೋ ಅಥವಾ ಸಚಿವಾಲಯದ ಅಧಿಕಾರಿಗಳ ಮೇಲಿನ ಅಪನಂಬಿಕೆಯಿಂದ ಹೀಗೆ ತಮ್ಮ ಸಲಹೆಗಾರರನ್ನು ನೇಮಿಸಿಕೊಂಡಿದ್ದಾರೋ ಎಂಬ ಪ್ರಶ್ನೆ ಉದ್ಭವಿಸಿದೆ.

Stay up to date on all the latest ರಾಜ್ಯ news
Poll
Parliament

ಸಂಸತ್ತಿನ ಈ ಮುಂಗಾರು ಅಧಿವೇಶನವು ಪ್ರಜಾಪ್ರಭುತ್ವದ ಕಗ್ಗೊಲೆಗೆ ಸಾಕ್ಷಿಯಾಯಿತೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp