ಮಹಾರಾಷ್ಟ್ರ ಚುನಾವಣೆ: ನೆರೆಹಾವಳಿ ನಡುವೆಯೂ ರಾಜ್ಯ ಬಿಜೆಪಿ ನಾಯಕರಿಂದ ಪ್ರಚಾರ, ಭಾರೀ ಟೀಕೆ

ರಾಜ್ಯದಲ್ಲಿ ನೆರೆ ಹಾವಳಿ ತಲೆದೋರಿದ್ದು, ಈ ನಡುವೆಯೇ ರಾಜ್ಯ ಬಿಜೆಪಿ ನಾಯಕರು ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಳ್ಳುತ್ತಿರುವುದರಿಂದ ಭಾರೀ ಟೀಕೆಗಳು ವ್ಯಕ್ತವಾಗತೊಡಗಿವೆ.

Published: 16th October 2019 11:44 AM  |   Last Updated: 16th October 2019 02:58 PM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : The New Indian Express

ಬೆಳಗಾವಿ: ರಾಜ್ಯದಲ್ಲಿ ನೆರೆ ಹಾವಳಿ ತಲೆದೋರಿದ್ದು, ಈ ನಡುವೆಯೇ ರಾಜ್ಯ ಬಿಜೆಪಿ ನಾಯಕರು ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಳ್ಳುತ್ತಿರುವುದರಿಂದ ಭಾರೀ ಟೀಕೆಗಳು ವ್ಯಕ್ತವಾಗತೊಡಗಿವೆ. 

ಪ್ರವಾಹದಿಂದಾಗಿ ರಾಜ್ಯದ ಲಕ್ಷಾಂತರ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ನಡುವೆ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಉಪ ಮುಖ್ಯಮಂತ್ರಿಗಳಾದ ಅಶ್ವತ್ಥ್ ನಾರಾಯಣ್ ಹಾಗೂ ಲಕ್ಷ್ಮಣ್ ಸವದಿಯವರು ಬಿಜೆಪಿ ಪರವಾಗಿ ಮಹಾರಾಷ್ಟ್ರದಲ್ಲಿ ಪ್ರಚಾರ ನಡೆಸಲು ತೆರಳುತ್ತಿದ್ದಾರೆ. 

ಅಥಣಿ, ಬೆಳಗಾವಿ ಮಾಜಿ ಶಾಸಕರ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಸಂಬಂಧಿಕರಾಗಿರುವ ಮೋಹನ್ ಶಾ ಕೂಡ, ಕರ್ನಾಟ ಮುಖ್ಯಮಂತ್ರಿಗಳು ಹಾಗೂ ಅವರ ತಂಡ ಪ್ರವಾಹ ಪರಿಹಾರ ಕಾರ್ಯಗಳತ್ತ ಗಮನ ಹರಿಸಬೇಕೆಂದು ಹೇಳಿದ್ದಾರೆ. 

ಕರ್ನಾಟಕ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ತಮ್ಮದೇ ರಾಜ್ಯದ ಜನರು ಸಂಕಷ್ಟದಲ್ಲಿದ್ದರೂ, ಮಹಾರಾಷ್ಟ್ರ ರಾಜ್ಯಕ್ಕೆ ಚುನಾವಣಾ ಪ್ರಚಾರಕ್ಕೆ ಬರುತ್ತಿರುವುದು ದುರಾದೃಷ್ಟಕರ ಸಂಗತಿ ಎಂದು ಹೇಳಿದ್ದಾರೆ. 

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರವಾಹ ಪೀಡಿತರನ್ನು ನಿರ್ಲಕ್ಷ್ಯ ವಹಿಸುತ್ತಿರುವುದಕ್ಕೆ ಅಥಣಿ ಮಾಜಿ ಶಾಸಕ ಶಾಹ್'ಜಹಾನ್ ದೊಂಗರ್ಗಾಂವ್ ಅವರೂ ಕೂಡ ಟೀಕೆ ಮಾಡಿದ್ದಾರೆ. 

ಚುನಾವಣಾ ಪ್ರಚಾರದಲ್ಲಿ ಮುಖ್ಯಮಂತ್ರಿ ಹಾಗೂ ಸವದಿಯವರು ಭಾಗಿಯಾಗುತ್ತಿರುವುದು ನ್ಯಾಯಯುತವಲ್ಲ. ಮಹಾರಾಷ್ಟ್ರ ಗಡಿ ಜಿಲ್ಲೆಗಳ ಮತದಾರರನ್ನು ಸೆಳೆಯಲು ಮಾತ್ರ ಸವದಿಯರಿಗೆ ಉಪ ಮುಖ್ಯಮಂತ್ರಿ ಹುದ್ದೆಯನ್ನು ನೀಡಲಾಗಿದೆ ಎಂದು ಆರೋಪಿಸಿದ್ದಾರೆ. 

ಡಿಸಿಎಂ ಅಶ್ವತ್ಥ್ ನಾರಾಯಣ್ ಅವರೂ ಕೂಡ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುತ್ತಿದ್ದು, ಮುಂದಿನ 2 ದಿನಗಳ ಕಾಲ ಪ್ರಚಾರದಲ್ಲಿ ತೊಡಗಿಕೊಳ್ಳಲಿದ್ದಾರೆ. ಇದಲ್ಲದೆ, ಮುಂದಿನ 2 ದಿನಗಳ ಕಾಲ ಯಡಿಯೂರಪ್ಪ ಅವರೂ ಕೂಡ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಅ.16ಕ್ಕೆ ಬೆಳಗಾವಿಗೆ ತೆರಳುವ ಅವರು, ಸಾಂಗ್ಲಿ ಜಿಲ್ಲೆಯಲ್ಲಿ ಪ್ರಚಾರ ನಡೆಸಲಿದ್ದಾರೆ. ಯಡಿಯೂರಪ್ಪ ಅವರೊಂದಿಗೆ ಮಹಾರಾಷ್ಟ್ರ ಬಿಜೆಪಿ ನಾಯಕರೂ ಕೂಡ ಪಾಲ್ಗೊಳ್ಳುತ್ತಿದ್ದಾರೆ. 

ಸೋಲಾಪುರ, ಅಕ್ಕಲ್ಕೊಟೆ, ಚಕೂರು, ಲಾಥೂರಿನಲ್ಲಿ ಯಡಿಯೂರಪ್ಪ ಅವರು ಪ್ರಚಾರ ನಡೆಸಲಿದ್ದಾರೆ. ಇದಾಗ ಬಳಿಕ ಪುಣೆಯಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆಂದು ತಿಳಿದುಬಂದಿದೆ. 

ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಸಂಪರ್ಕಿಸಲು ಯತ್ನಿಸಿದಾಗ, ಪ್ರತಿಕ್ರಿಯೆ ನೀಡಲು ಕಟೀಲ್ ಅವರು ನಿರಾಕರಿಸಿದ್ದಾರೆ. 

Stay up to date on all the latest ರಾಜ್ಯ news with The Kannadaprabha App. Download now
Poll
Priyanka gandhi

ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶದಲ್ಲಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಬೇಕೇ?


Result
ಹೌದು
ಬೇಡ
ಗೊತ್ತಿಲ್ಲ
facebook twitter whatsapp